



ಮಡಿಕೇರಿ ಫೆ.27 NEWS DESK : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಮಾರ್ಚ್, 2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾ.2 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ‘ಅರೆಭಾಷೆ ಗಡಿನಾಡ ಉತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಟಿ.ಎಸ್.ಫಣಿಕುಮಾರ್ ತಿಳಿಸಿದ್ದಾರೆ.