
ಮಡಿಕೇರಿ ಫೆ.27 NEWS DESK : ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲೆಮಾಡು ಕಾಲೋನಿ ಹಾಗೂ ಕಾನ್ಶಿರಾಮ್ ನಗರದಲ್ಲಿ ಸರಕಾರದಿಂದ ಬಿಡುಗಡೆಯಾದ ರೂ.2 ಕೋಟಿ ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾ.ಪಂ ಅಧ್ಯಕ್ಷ ಹೆಚ್.ಎ ಹಂಸ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಹೊದ್ದೂರು ಗ್ರಾಮ ಪಂಚಾಯಿತಿಯ ಬಗ್ಗೆ ಶಾಸಕರಾದ ಡಾ.ಮಂತರ್ ಗೌಡ ವಿಶೇಷ ಕಾಳಜಿ ವಹಿಸಿ ಅನುದಾನವನ್ನು ನೀಡುತ್ತಿದ್ದಾರೆ. ಪಾಲೆಮಾಡು ಮತ್ತು ಕಾನ್ಶಿರಾಮ ಕಾಲೋನಿಗೆ ತಲಾ ಒಂದು ಕೋಟಿ ರೂ ಅನುದಾನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಸಂದರ್ಭ ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಹೆಚ್.ಎ.ಹಂಸ ಸೂಚನೆ ನೀಡಿದ್ದರು. ಗ್ರಾ.ಪಂ ಉಪಾಧ್ಯಕ್ಷ ಅನುರಾಧ, ಸದಸ್ಯರಾದ ಹಮೀದ್ , ಹೊನ್ನಪ್ಪ ಕುಸುಮಾವತ, ಮೊಣ್ಣಪ್ಪ ಹಾಗೂ ಗ್ರಾಮಸ್ಥರು ಇದ್ದರು.









