ಮಡಿಕೇರಿ ಫೆ.27 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಪಂಚಾಯತಿ ಅಧ್ಯಕ್ಷ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ತಿಂಗಳಲ್ಲಿ ಆನೆ ಕೆರೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಇರುವ ಕೋಳಿ, ಮತ್ತು ಆಡು ಮಾಂಸದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಮಾಡುವ ಮೂಲಕ ಗ್ರಾಮ ಪಂಚಾಯತಿಗೆ ಆದಾಯ ಕ್ರೋಡೀಕರಿಸುವ ವಿವಿಧ ಯೋಜನೆಯಗಳ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಲ್ಲದೆ ಈಗಾಗಲೇ 15 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಕ್ರಿಯಾ ಯೋಜನೆ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚೆಗಳು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ವಿಷಯ ಹಾಗೂ ವಸತಿ ರಹಿತರಿಗೆ ನಿವೇಶನದ ಜಾಗವನ್ನು ಒದಗಿಸುವ ಬಗ್ಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಹಾಜರಿದ್ದ ಸದಸ್ಯರು ಮುಂದಿನ ದಿನಗಳಲ್ಲಿ ಬೇಸಿಗೆ ಕಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ಅಧ್ಯಕ್ಷತೆಯನ್ನು ವಹಿಸಿದ್ದ ಭಾಸ್ಕರ್ ನಾಯಕ್ ಮಾತಾನಾಡಿ ಸದಸ್ಯರುಗಳ ಅಭಿಪ್ರಾಯಗಳನ್ನು ನಿಯಮಾನುಸಾರ ತೆಗೆದುಕೊಂಡು ಕಾರ್ಯಗತಗೊಳಿಸಲು ಮುಂದಾಗುವುದು, ಅಲ್ಲದೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಅಂಗಡಿ ಮಾಲೀಕರು ತಮ್ಮ ತಮ್ಮ ಅಂಗಡಿ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಶೇ.60.ರಷ್ಟು ಕನ್ನಡ ಪದಗಳನ್ನು ಬಳಸುವಂತೆ ಸೂಚನೆ, ಮತ್ತು ಜಾರಿಗೆ ತರುವ ಕಾರ್ಯಕ್ಕೆ ಮುಂದಾಗುತ್ತೇವೆ , ಅಲ್ಲದೆ ಸಾಮಾನ್ಯ ಸಭೆಯ ತೀರ್ಮಾನದಂತೆ ಎಲ್ಲಾ ವಾರ್ಡ್ ಗಳಿಗೆ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಹೆಚ್ಚಿನ ಕ್ರಮ ವಹಿಸಲಾಗುವುದು ,ಹೊಸ ಯೋಜನೆಯ ಅನುಷ್ಠಾನದ ಮೂಲಕ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಸರಕಾರದ ಹೊಸ ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು. ಸಂತೋಷ್ ಸ್ವಾಗತಿಸಿ, ವಂದಿಸಿದರು.











