ಮಡಿಕೇರಿ ಫೆ.27 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿರುವ ಶ್ರೀ ರಾಮೋತ್ಸವ ಆಡಳಿತ ಮಂಡಳಿ ವತಿಯಿಂದ ಫೆ.28 ರಂದು 35ನೇ ಶ್ರೀ ರಾಮೋತ್ಸವ ಅಂಗವಾಗಿ ಸಭೆ ನಡೆಯಲಿದೆ. ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಸಂಜೆ 5 ಗಂಟೆಗೆ ಶ್ರೀ ಕೋದಂಡರಾಮ ದೇವಾಲಯ ಸಮಿತಿ ವತಿಯಿಂದ ಪೂಜೆ ಸಲ್ಲಿಸಿ, ನಂತರ ದೇವಾಲಯದ ಆವರಣದಲ್ಲಿ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ.











