Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ದಿನಾಚರಣೆ : ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಟಿ.ಜಿ.ಪ್ರೇಮಕುಮಾರ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ದಿನಾಚರಣೆ : ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಟಿ.ಜಿ.ಪ್ರೇಮಕುಮಾರ್ ಸಲಹೆ*

ಫೆಬ್ರವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.28 NEWS DESK :  ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ‌ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಇಕೋ ಕ್ಲಬ್, ಎನ್.ಎಸ್.ಎಸ್.ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ “* *ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವ ಜನತೆಯ ಸಬಲೀಕರಣ*” ಎಂಬ ಧ್ಯೇಯ ವಾಕ್ಯದೊಂದಿಗೆ  ರಾಷ್ಟ್ರೀಯ ವಿಜ್ಞಾನ ದಿನಾಚರಣೆ-2025 ಹಾಗೂ ವಿಜ್ಞಾನ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜ್ಞಾನ ದಿನಾಚರಣೆಯ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಕುರಿತು ಭಾರತೀಯ ಸಂವಿಧಾನದ 51 ( ಎಚ್) ವಿಧಿಯ ಮಹತ್ವ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತಾದ ಪ್ರತಿಜ್ಞಾ ವಿಧಿ ಬೋಧಿಸಿ ವಿಜ್ಞಾನ ದಿನಾಚರಣೆಯ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯ ಶಿಕ್ಷಕರೂ ಆದ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್, ವಿಜ್ಞಾನ ಎಲ್ಲರಿಗೂ ಅಗತ್ಯವಾಗಿದೆ. ಭಾರತವು ವಿಶ್ವಮಟ್ಟದಲ್ಲಿ ವಿಜ್ಞಾನದ ಪ್ರಗತಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡುತ್ತಾ ಬಂದಿದೆ. ದೇಶೀಯ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಭಾರತವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದರು. ವಿದ್ಯಾರ್ಥಿಗಳು ಶ್ರೇಷ್ಠ ವಿಜ್ಞಾನಿ ಸರ್ ಸಿ.ವಿ.ರಾಮನ್ ರಂತಹ ವಿಜ್ಞಾನಿಗಳ ಸಾಧನೆ ಮತ್ತು ಸಂಶೋಧನೆ ಬಗ್ಗೆ ಹೆಚ್ಚಿನ ಜ್ಞಾನ ಹೊಂದಬೇಕು ಎಂದರು. ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು. ವಿಜ್ಞಾನ ಮತ್ತು ತಂತ್ರಜ್ಞಾನ ದಿನೇ ದಿನೇ ಬೆಳೆಯುತ್ತಿರುವುದರಿಂದ ಭಾರತ ದೇಶವು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಪ್ರೇಮಕುಮಾರ್ ಹೇಳಿದರು. ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಏರ್ಪಡಿಸಿದ್ದ ವಿಜ್ಞಾನ ಮಾದರಿಗಳ ಕುರಿತು ಮಾಹಿತಿ ನೀಡಿದ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ ಅವರು ಸರ್ ಸಿ.ವಿ.ರಾಮನ್ ಅವರ ರಾಮನ್ ಪರಿಣಾಮಗಳು ( ರಾಮನ್ ಎಫೆಕ್ಟ್ ) ವೈಜ್ಞಾನಿಕ ಸಂಶೋಧನೆ ಕುರಿತು ವಿವರಿಸಿದರು. ದೇಶದ ಅಭಿವೃದ್ಧಿಗೆ ಭಾರತೀಯ ವಿಜ್ಞಾನಿಗಳ ಕೊಡುಗೆಯನ್ನು ಗುರುತಿಸಲು ಪ್ರತಿ ವರ್ಷ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು. ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಕೆ.ಟಿ.ಸೌಮ್ಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಳಿನಿ ಇದ್ದರು. ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ವಸ್ತುಗಳ ಮಾದರಿ ಪ್ರದರ್ಶನದ ಕಾರ್ಯಕ್ರಮದಲ್ಲಿ ಸ್ಥಳೀಯ ಕೂಡ್ಲೂರು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗಮನ ಸೆಳೆದ ವಿಜ್ಞಾನ ಮಾದರಿಗಳು ::  ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಹಬ್ಬ ಅಂಗವಾಗಿ ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ ಗಮನ ಸೆಳೆಯಿತು. ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಸೂಕ್ಷ್ಮದರ್ಶಕದಲ್ಲಿ ಸೂಕ್ಷ್ಮ ವಸ್ತುಗಳ ವೀಕ್ಷಣೆ, ಶಕ್ತಿ ಬಳಕೆಯ ಪ್ರಯೋಗಗಳು, ಖಗೋಳ ವಿಜ್ಞಾನ ಮತ್ತು ಸೌರವ್ಯೂಹ ವ್ಯವಸ್ಥೆ, ಭೌತಶಾಸ್ತ್ರದಲ್ಲಿ ವಿಜ್ಞಾನಿ‌ ಸರ್ ಸಿ.ವಿ.ರಾಮನ್ ಅವರ ಸಾಧನೆಗಳು ಗಮನ ಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.