Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಂಗೋತ್ಸವದಲ್ಲಿ ದೈವ ಆರಾಧನೆಗೆ ಅವಕಾಶ : ದೈವ ಆರಾಧಕರಿಂದ ಪ್ರತಿಭಟನೆ*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಂಗೋತ್ಸವದಲ್ಲಿ ದೈವ ಆರಾಧನೆಗೆ ಅವಕಾಶ : ದೈವ ಆರಾಧಕರಿಂದ ಪ್ರತಿಭಟನೆ*  

ಫೆಬ್ರವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ವಿರೋಧಿಸಿ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಸಂಘದ ಪ್ರಮುಖರು, ದೈವ ಆರಾಧಕರು ಹಾಗೂ ದೈವ ನರ್ತಕರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.  ಜಿಲ್ಲಾ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಮಾತನಾಡಿ, ಮನೋರಂಜನೆಯ ಕಲೆಯ ಸಾಲಿಗೆ ದೈವ ಆರಾಧನೆಯನ್ನು ಸೇರಿಸುವ ಕ್ರಮ ಸರಿಯಲ್ಲವೆಂದರು. ದೈವ ಆರಾಧನೆಯು ಕರಾವಳಿ ಸೇರಿದಂತೆ ಕೊಡಗು ಜಿಲ್ಲೆಯಲ್ಲು ಬಹುಮುಖ್ಯ ನಂಬಿಕೆ ಮತ್ತು ಆರಾಧನೆ ಪದ್ದತಿಯಾಗಿದ್ದು, ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಈಗಿನ ಸರ್ಕಾರ ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿರುವುದು ದೈವಾರಾಧನೆ ಮಾಡುವ ಕ್ಷೇತ್ರದ ಜನರಿಗೆ ನೋವುಂಟಾಗಿದೆ. ದೈವ ನರ್ತನ ಸೇವೆ ಮಾಡುವ ಕೆಲವೇ ಸೀಮಿತ ವರ್ಗದ ಸಮುದಾಯಕ್ಕೆ ಇದು ಅವಮಾನ ಮಾಡಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.  ದೈವ ಆರಾಧನೆ ವೇದಿಕೆ ಮೇಲೆ ಪ್ರದರ್ಶನ ಮಾಡುವ ಮನೋರಂಜನೆಗೆ ಬಳಸುವ ಜಾನಪದ ಕಲೆಯಲ್ಲ. ಸರ್ಕಾರ ನಾಡಿನ ವಿಭಿನ್ನ ಕಲೆ ಸಂಸ್ಕೃತಿಯನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ಭರದಲ್ಲಿ ದೈವ ಆರಾಧನೆ (ಭೂತಾರಾಧನೆ)ಯನ್ನು ರಂಗೋತ್ಸವದ ಕಾರ್ಯಕ್ರಮದಲ್ಲಿ ಬಳಸುವಂತೆ ಸುತ್ತೋಲೆ ನೀಡಿರುವುದು ಧಾರ್ಮಿಕ ನಂಬಿಕೆಯ ಮೇಲೆ ಸವಾರಿ ಮಾಡಿದಂತಾಗಿದೆ ಎಂದು ಆರೋಪಿಸಿದರು.  ಮುಖ್ಯಮಂತ್ರಿಗಳು ಮಧ್ಯ ಪ್ರವೇಶಿಸಿ ದೈವರಾಧನೆಯನ್ನು ರಂಗೋತ್ಸವದಿಂದ ಕೈ ಬಿಡುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಬೇಕು. ಇಲ್ಲದಿದ್ದಲ್ಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪಿ.ಎಂ.ರವಿ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಸದಾಶಿವ ರೈ, ಸಂಘಟನಾ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ  ರಾಜೇಶ್ ಪೂಜಾರಿ, ಖಜಾಂಜಿ ಜನಾರ್ಧನ ಪೂಜಾರಿ, ಸಂಘದ ಸಲಹೆಗಾರ ಕೆ.ಕೆ.ದೇವಪ್ಪ,  ಸುಳ್ಯದ ದೈವ ನರ್ತಕ  ಜಯರಾಮ್, ಸುಬ್ರಹ್ಮಣ್ಯದ ದೈವ ನರ್ತಕ ಧರ್ಮ, ಸಂಘದ ಸದಸ್ಯರುಗಳಾದ ಪವನ್ ಮೊಗೇರ, ದಿನೇಶ್, ಅಣ್ಣು ಪೂಜಾರಿ, ಜನಾರ್ದನ, ರಾಮಕೃಷ್ಣ, ಸುರೇಶ್ ಕುಲಾಲ್, ಹರೀಶ್ ಜಿ.ಆಚಾರ್ಯ, ಮಂಜುನಾಥ್  ಸೇರಿದಂತೆ ಹಲವು ದೈವ ಆರಾಧಕರ ಸಂಘದ ಪದಾಧಿಕಾರಿಗಳು, ಕೊಡಗು, ಸುಳ್ಯ ಮತ್ತು ಸುಬ್ರಮಣ್ಯ ಭಾಗದ ದೈವ ನರ್ತಕರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.