
ಮಡಿಕೇರಿ NEWS DESK ಮಾ.1 : ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಚಿಕ್ಕ ಇಂದುವಾಡಿಯಲ್ಲಿ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಮೈಸೂರಿನ ಲಿಖಿತ, ಶ್ರೀಲಕ್ಷಿö್ಮ, ಮಂಡ್ಯದ ಸುಹಾಸ್, ಶ್ರೇಯಸ್ ಹಾಗೂ ನಿತಿನ್ ಮೃತ ದುರ್ದೈವಿಗಳು. ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾ.1ರಂದು (ಇಂದು) ಬೆಳಿಗ್ಗೆ ಮಲೈಮಹದೇಶ್ವರ ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಎದುರಿಗೆ ಬಂದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟರು. ಭೀಕರ ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಟಿಪ್ಪರ್ ಮಗುಚಿಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಘಟನೆಯಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.









