
ವಿರಾಜಪೇಟೆ ಮಾ.1 NEWS DESK : ವಿರಾಜಪೇಟೆ ನಗರದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್.ಘಟಕದ ವಾರ್ಷಿಕ ಶಿಬಿರವು ಮಾ.4 ರಿಂದ ಮಾ.10ರ ವರೆಗೆ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾ.4 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಶಿಬಿರವನ್ನು ಉದ್ಘಾಟಿಸಲಿದ್ದು, ಬೇಟೋಳಿ ಗ್ರಾ.ಪಂ ಅಧ್ಯಕ್ಷ ಅಚ್ಚಪಂಡ ಬೋಪಣ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಆರ್.ರಾಜೇಶ್, ಜಿ.ಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಉದ್ಯಮಿಗಳಾದ ಸಜೇಶ್ ಭರತನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಟಿ.ಹೇಮಲತಾ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಶಿಬಿರದ ದಿನಗಳಂದು ವಿದ್ಯಾರ್ಥಿಗಳಿಂದ ಶ್ರಮದಾನ, ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಆರೋಗ್ಯ ಜಾಗೃತಿ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿವೆ. ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಡಿ.ಡಿ.ಪಿ.ಐ ಪೆರಿಗ್ರೀನ್ ಎಸ್ ಮಚಡೋ, ವಿರಾಜಪೇಟೆ ನಗರ ಪೊಲೀಸ್ ಠಾಣಾಧಿಕಾರಿ ವಾಣಿ, ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಹೇಮಪ್ರಿಯ, ಮಾಧ್ಯಮ ವಿದ್ಯಾರ್ಥಿ ಸಂವಾದದಲ್ಲಿ ವಿರಾಜಪೇಟೆಯ ಪತ್ರಕರ್ತರಾದ ಅಬ್ದುಲ್ ರೆಹಮಾನ್, ಉಷಾ ಪ್ರೀತಮ್, ಬಿ.ಬಿ.ಸುನಿಲ್ ಕುಮಾರ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಉಪನ್ಯಾಸದಲ್ಲಿ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ಐಕ್ಯೂ ಎಸಿ ಸಂಚಾಲಕ ಡಾ. ಬಿ.ಬಿ.ರಾಮಕೃಷ್ಣ, ಪಾಲ್ಗೊಂಡು ಉಪನ್ಯಾಸವನ್ನು ನೀಡಲಿದ್ದಾರೆ. ಮಾ.9 ರಂದು ರಾತ್ರಿ ಶಿಬಿರ ಜ್ಯೋತಿಯನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಉದ್ಘಾಟಿಸಲಿದ್ದಾರೆ. ಮಾ.10 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಉದ್ಯಮಿ ಹಾಗೂ ಸಮಾಜ ಸೇವಕಿ ಪೂಜಾ ಸಜೇಶ್ ಸಮಾರೋಪ ಭಾಷಣವನ್ನು ಮಾಡಲಿದ್ದಾರೆ. ವಿರಾಜಪೇಟೆ ಪುರಸಭಾ ಸದಸ್ಯ ಪಟ್ಟಡ ರಂಜಿ ಪೂಣಚ್ಚ, ನಿವೃತ್ತ ಪ್ರಾಂಶುಪಾಲ ಪಟ್ಟಡ ಪೂವಣ್ಣ, ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಬಿ. ಎನ್.ಶಾಂತಿಭೂಷಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









