
ಮಡಿಕೇರಿ ಮಾ.1 NEWS DESK : ಮಡಿಕೇರಿ ನಗರದ ವಾರ್ಡ್ ನಂ.10 ರ ಮಾರುಕಟ್ಟೆ ವ್ಯಾಪ್ತಿಯಲ್ಲಿರುವ ಕೋಳಿ ಮಾಂಸದ ಅಂಗಡಿ ಹಾಗೂ ಕಸಾಯಿ ಖಾನೆ ಹಿಂಭಾಗದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ಕಲುಷಿತ ನೀರು ನಿಲುಗಡೆಯಿಂದ ಗ್ರಾಹಕರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದು ಉತ್ತಮ ಚರಂಡಿ ಹಾಗೂ ಸಾರ್ವಜನಿಕರಿಗಾಗಿ ಶೌಚಾಲಯವನ್ನು ನಿರ್ಮಿಸಿಕೊಡುವಂತೆ ನಗರಸಭಾ ಸದಸ್ಯ ಎಂ.ಎ.ಮುಸ್ತಫಾ ಮನವಿ ಮಾಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಶಾಸಕ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಮಾರುಕಟ್ಟೆ ವ್ಯಾಪ್ತಿಯಲ್ಲಿರುವ ಕೋಳಿ ಮಾಂಸದ ಅಂಗಡಿ ಹಾಗೂ ಕಸಾಯಿ ಖಾನೆ ಹಿಂಭಾಗದಲ್ಲಿ ಸೂಕ್ತ ಚರಂಡಿ ಹಾಗೂ ಶೌಚಾಲಯದ ವ್ಯವಸ್ಥೆ ಇಲ್ಲದೆ ಗ್ರಾಹಕರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ದುರ್ವಾಸನೆಯಿಂದ ತೊಂದರೆ ಅನುಭವಿಸುತ್ತಿದ್ದು, ಸಾಂಕ್ರಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ. ಆದ್ದರಿಂದ ಉತ್ತಮ ಚರಂಡಿ ಹಾಗೂ ಸಾರ್ವಜನಿಕರಿಗಾಗಿ ಶೌಚಾಲಯವನ್ನು ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.









