Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಭಾಷೆ ಗಡಿನಾಡ ಉತ್ಸವ : ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ:  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಭಾಷೆ ಗಡಿನಾಡ ಉತ್ಸವ : ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ:  

ಮಾರ್ಚ್ 2, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಮಾ.2 : ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ  ಎಂದು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗಸಂಸ್ಥೆಗಳ ಹಾಗೂ ವಿವಿಧ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ -2025 ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ತಾಯಿನುಡಿಗಳನ್ನು ಬಳಕೆ ಮಾಡುವ ಮೂಲಕ ಉಳಿಸುವುದರೊಂದಿಗೆ ಅಕಾಡೆಮಿ ಮೂಲಕ ಭಾಷೆಯ ಅಭಿವೃದ್ಧಿಗೆ ಕಾರ್ಯಸೂಚಿ ನೀಡುವ ಕೆಲಸವಾಗಬೇಕಾಗಿದೆ ಎಂದರು. ಪ್ರಸಕ್ತ ಭಾಷೆ ಸಂಸ್ಕೃತಿ ದಿಕ್ಕಾಪಾಲಾಗಿ ಹೋಗುತ್ತಿದ್ದು, ಜನಗಣತಿ ಮೂಲಕ ತಮ್ಮ ಸಮುದಾಯದ ಜನಸಂಖ್ಯೆ ಮಾಹಿತಿಯನ್ನು ಸರಕಾರಕ್ಕೆ ಲಭಿಸುವಂತೆ ಮಾಡುವುದು, ಮುಖ್ಯ ಭಾಷೆ -ಉಪಭಾಷೆಗಳ ನಡುವೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದು ಈ ಮೂಲಕ ಭಾಷೆಗಳ ಬೆಳವಣಿಗೆ ಸಾಧ್ಯ ಎಂದ ಅವರು ಅಧಿಕಾರದ ಮೂಲಕ ಭಾಷೆಗಳನ್ನು ನಿರ್ಧಾರ ಮಾಡುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಚರಿತ್ರೆಗಳು ಜನರಿಗೆ ಭಾರ ಆಗದೇ ಶಕ್ತಿ ನೀಡುವಂತಾಗಬೇಕು ನಮ್ಮ ನಡುವೆ ಬಳಕೆ ಮಾಡುವ ಪದಗಳು ಮತ್ತಿತರ ವಿಷಯಗಳ ಸಂಗ್ರಹ ಮೂಲಕ ಕೋಶ ತಯಾರಿಸುವಂತೆ ಸಲಹೆ ನೀಡಿದರು. ಭಾಷೆಗಳು ಉಳಿದಲ್ಲಿ ಮಾತ್ರ ದೇಶದ ಉಳಿವು ಸಾಧ್ಯ ಎಂದ ಅವರು ದೇಶದ 172 ಭಾಷೆಗಳು ಮುಂದಿನ ಐದು ದಶಕಗಳಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದಾಗಿ ಹೇಳಿದರು. ಮುಂದಿನ ದಿನಗಳಲ್ಲಿ ಮಾತೃಭಾಷೆ ಬಿಟ್ಟು ಇತರ ಭಾಷಿಗರ ಗುಲಾಮರಾಗುವ ಸಾಧ್ಯತೆಗಳೇ ಅಧಿಕವಾಗಿದೆ ಎಂದು  ಆತಂಕ ವ್ಯಕ್ತಪಡಿಸಿದರು. ಸ್ಥಳೀಯ ಭಾಷೆ ಉಳಿಸಲು ಸೂಕ್ತ ಕಾರ್ಯ ಯೋಜನೆ ಕಾರ್ಯಸೂಚಿ ಇಲ್ಲದಿರುವುದು. ಈ ನಡುವೆ ಇತರ ಸಮುದಾಯಗಳು ಚಿಕ್ಕ ಸಮುದಾಯಗಳ ಭಾಷೆಗಳನ್ನು ಸಾಯಿಸಲು ಯತ್ನಿಸುತ್ತಿದೆ ಎಂದು ವಿಷಾದಿಸಿದ ಪುರುಷೋತ್ತಮ ಬಿಳಿಮಲೆ ಕನ್ನಡ ಭಾಷೆ ಕೂಡ ಕುಸಿತ ಕಾಣುತ್ತಿದ್ದು ಹಿಂದಿ ಭಾಷೆ ಬೆಳೆಯುತ್ತಿರುವ ಅಂಕಿ ಅಂಶಗಳ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು. ಇದೇ ಸಂದರ್ಭ ಮಾತನಾಡಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅಕಾಡೆಮಿ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಸಕ್ತ ಕುಶಾಲ್ನಗರದಲ್ಲಿ ಗಡಿನಾಡ ಉತ್ಸವ ನಾಲ್ಕನೇ ಕಾರ್ಯಕ್ರಮ ವಾಗಿದ್ದು ಅರೆ ಭಾಷೆ ಉಳಿವಿನ ಬಗ್ಗೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಈ ಸಂಬಂಧ ಹಲವು ಪುಸ್ತಕಗಳನ್ನು ಈಗಾಗಲೇ ಅಕಾಡೆಮಿ ಮೂಲಕ ಬಿಡುಗಡೆಗೊಳಿಸಲಾಗಿದೆ ಸಂಶೋಧನಾ ಪ್ರಬಂಧಗಳನ್ನು ಕೂಡ ಪ್ರಕಟಿಸಲಾಗಿದೆ 12 ಕೃತಿಗಳನ್ನು ಕೂಡ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಸುಳ್ಯದಲ್ಲಿ ಅರೆ ಭಾಷೆ ಸಾಹಿತ್ಯ ಸಮ್ಮೇಳನ ನಡೆಯುವ ಬಗ್ಗೆ ಮಾಹಿತಿ ಒದಗಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಮಾತನಾಡಿ ಭಾಷೆ ಸಂಸ್ಕೃತಿ ಆಚಾರ ವಿಚಾರ ಉಳಿಸಿ ಬೆಳೆಸುವುದು ಪೋಷಕರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಅಕಾಡೆಮಿ ವತಿಯಿಂದ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಭಾಷಾ ಜಾಗೃತಿ ಮೂಡಿಸಬಹುದು ಎಂದು ಸಲಹೆ ನೀಡಿದರು. ಸಮಾಜದ ಒಗ್ಗಟ್ಟಿನ ಮೂಲಕ ಮುಂದಿನ ಜನಾಂಗಕ್ಕೆ ಸಇತಿಹಾಸವನ್ನು ಹಸ್ತಾಂತರಿಸುವ ಕೆಲಸವಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಾಜಿ ಸಭಾಪತಿ ಕೆ ಜಿ ಬೋಪಯ್ಯ ಅವರು ಮಾತನಾಡಿ ಮಕ್ಕಳಿಗೆ ಭಾಷೆಯ ಬಗ್ಗೆ ಆಚಾರ ವಿಚಾರ ಸಂಸ್ಕೃತಿ ಉಳಿಸುವ ಬಗ್ಗೆ ಪೋಷಕರು ತಿಳಿಸುವಂತೆ ಆಗಬೇಕು. ಅಕಾಡೆಮಿ ಮೂಲಕ ಸಂಸ್ಕೃತಿ ಸಾಹಿತ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವಂತೆ ಆಗಬೇಕು ಈಗಾಗಲೇ ಅಧ್ಯಯನ ಪೀಠ ಸ್ಥಾಪನೆಯಾಗಿದ್ದು ಸಮಾಜದ ಮೂಲ ಸಂಸ್ಕೃತಿ ಬಗ್ಗೆ ನಿರಂತರ ಅಧ್ಯಯನ ಮಾಡುವಂತಾಗಬೇಕು ಒಗ್ಗಟ್ಟಾಗಿ ಇತರರಿಗೆ ಮಾರ್ಗದರ್ಶನ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದರು. ಅಕಾಡೆಮಿ ಸದಸ್ಯರಾದ ಸೂದನ ಈರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸದಸ್ಯ ಸಂದೀಪ್ ಪೂಳಕಂಡ, ಕುಶಾಲನಗರ ಗೌಡ ಸಮಾಜ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ , ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ,ಆಲೂರು ಸಿದ್ದಾಪುರದ ದೇವಾಯೀರ ಗಿರೀಶ್, ಸುಂಟಿಕೊಪ್ಪ ಸಮಾಜದ ಕುಂಜಿಲನ ಮಂಜುನಾಥ್, ಗುಡ್ಡೆ ಹೊಸೂರು ಗೌಡ ಸಮಾಜ ಅಧ್ಯಕ್ಷ ಗುಡ್ಡೆಮನೆ ವಿಶುಕುಮಾರ್, ನಂಜರಾಯಪಟ್ಟಣದ ಕೆಮ್ಮಾರನ ಉತ್ತಯ್ಯ ಚೆಟ್ಟಳ್ಳಿ ಸಮಾಜದ ರಾಘವಯ್ಯ ಐಯ್ಯಂಡ್ರ, ಚಿಕ್ಕತ್ತೂರು ಸಮಾಜದ ಚೆರಿಯ ಮನೆ ಮಂದಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ನವೀನ ಅಂಬೆಕ್ಕಲ್ ಮತ್ತಿತರರು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಹೊರಟ ಮೆರವಣಿಗೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಚಾಲನೆ ನೀಡಿದರು. ಅಕಾಡೆಮಿ ಸದಸ್ಯ ಸಂಚಾಲಕರಾದ ಪೊನ್ನಚ್ಚನ ಮೋಹನ್ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.