Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮ  : ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ : ಟಿ.ಪಿ.ರಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮ  : ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ : ಟಿ.ಪಿ.ರಮೇಶ್*

ಮಾರ್ಚ್ 3, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ ಮಾ.3 NEWS DESK :  ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಶರಣ ಸಾಹಿತ್ಯದ ತಿರುಳನ್ನು ಪ್ರಸ್ತುತ ಸಮಾಜಕ್ಕೆ ಅಳವಡಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ-ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂಗೈಕ ಮಾಗನೂರು ಬಸಪ್ಪ ದತ್ತಿ ಶರಣ ಸಂಸ್ಕೃತಿ ದತ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ.ಶರಣ ಎಂದರೆ ಸಜ್ಜನ, ಸದ್ಭಕ್ತಿ, ಅನುಭಾವಿ ಎಂಬ ವ್ಯಕ್ತಿತ್ವ.ದತ್ತಿನಿದಿಯ ಶರಣ ಮಾಗನೂರು ಬಸಪ್ಪನವರು ಹುಟ್ಟಿನಿಂದ ದೊಡ್ಡವರಾಗಿ ಹುಟ್ಟಿದವರಲ್ಲ; ಹುಟ್ಟಿ ದೊಡ್ಡವರಾಗಿ ಬದುಕಿ, ಬಾಳಿ ಶಿಸ್ತನ್ನು ರೂಢಿಸಿಕೊಂವರು.ಶಿಕ್ಷಣ, ಸಂಸ್ಕೃತಿ, ದಾಸೋಹದಂತಹ ಸಮಾಜಮುಖಿ ಕೆಲಸ ಮಾಡಿದವರು. ಕೊಡಗಿನಲ್ಲಿ ಶರಣ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಬೇಕಿದೆ. ವೈಜ್ಞಾನಿಕ ಯುಗದಲ್ಲಿ ಪಂಚಭೂತಗಳ ಪಾವಿತ್ರ‍್ಯತೆಯನ್ನು ಕಾಪಾಡಬೇಕು, ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ಮಾಡಬೇಕಿದೆ.ವಚನ ಸಂದೇಶ ಇಡಿ ಮಾನವ ಕುಲವನ್ನೇ ಸಮಾಜದತ್ತ ಕರೆ ತರುತ್ತದೆ.ಬಸವಾದಿ ಶರಣರು ಆಧ್ಯಾತ್ಮಿಕ ಸಮಾಜವನ್ನು ಕಟ್ಟಿದ್ದು ಜನವಾಣಿಯನ್ನೇ ದೇವವಾಣಿಯೆಂದು ಕರೆದಿದ್ದಾರೆ ಎಂದರು. ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕ ನುಡಿಯಾಡಿ, ಶರಣ ದತ್ತಿ ದಾನಿಗಳ ದಾನದ ಬಗ್ಗೆ, ವ್ಯಕ್ತಿತ್ವದ ಬಗ್ಗೆ ಸ್ಮರಣೆ ಅತ್ಯಗತ್ಯವಾಗಿದೆ. ಹನ್ನೆರಡನೇ ಶತಮಾನಕ್ಕೂ ಹಿಂದೆ ಸಾಹಿತ್ಯ ಕ್ಲಿಷ್ಟಕರವಾದ ಸಂಸ್ಕೃತ ಭಾಷೆಯಲ್ಲಿದ್ದು ಅದು ಜನ ಸಾಮಾನ್ಯರಿಗೆ ತಲುಪುತ್ತಲಿರಲಿಲ್ಲ. ವಚನ ಸಾಹಿತ್ಯ ಬಂದ ನಂತರ ಅವು ಸುಲಭ ಕನ್ನಡದಲ್ಲಿ ಇದ್ದು ಎಲ್ಲರಿಗೂ ತಲುಪುವಂತಾಯಿತು. ವಚನ ಸಾಹಿತ್ಯದ ಗಾಯನದ ಜತೆಗೆ ಅದರ ಅರ್ಥ ಮತ್ತು ಅದರ ಒಳಹರವು ಅರ್ಥ ಮಾಡಿಕೊಂಡು ಅದರಲ್ಲಿರುವ ಸಕಾರಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕಾಗಿದೆ ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ಒಂದು ದೊಡ್ಡ ಭಂಡಾರವಿದ್ದತೆ. ಅತ್ಯಂತ ಪುರಾತನವಾದ ಪರಂಪರೆ ಇದು. ರೋಮಾಂಚನಕಾರಿಯಾದ ಇತಿಹಾಸವಿದೆ. ನಾಗರೀಕತೆಯ ಸುದೀರ್ಘವಾದ ಚರಿತ್ರೆ ಇದೆ. ಸಾಹಿತ್ಯ-ಸಂಸ್ಕೃತಿ ಧರ್ಮ ಸಿದ್ಧಾಂತಗಳ ಭಂಡಾರವಿದೆ ಸಾಹಿತಿ ಜಲಜಾ ಶೇಖರ್ ದತ್ತಿ ಉಪನ್ಯಾಸ ನೀಡುತ್ತಾ 12ನೇ ಶತಮಾನದ ವಚನ ಸಾಹಿತ್ಯ ಒಂದು ತಪೋವನದಂತೆ ಭಾಸವಾಗುತ್ತದೆ.ಬಸವಾದಿ ಶರಣರ ಕ್ರಾಂತಿಕಾರಿ ಕೆಲಸಗಳು ವಿಶ್ವ ಮಾನ್ಯತೆ ಪಡೆದಿದೆ. ವಚನಕಾರರ ಬದುಕು, ನಡೆ-ನುಡಿ ಸಿದ್ಧಾಂತವೇ ವಚನ ಸಾಹಿತ್ಯ.ವಚನಕಾರರ ಕಾಯಕ ನಿಷ್ಠೆ ಅನುಕರಣೀಯ ಎಂದರು.  ಹನ್ನೆರಡನೆಯ ಶತಮಾನದಲ್ಲಿ ಪ್ರಜಾಪ್ರಭುತ್ವದ ಉಳಿವಿಗಾಗಿ ಶರಣರು ಮತ್ತು ಶರಣೆಯರು ನಡೆಸಿದ ಕ್ರಾಂತಿ ಅನುಭವ ಮಂಟಪದ ಮೂಲಕ ತೆಗೆದುಕೊಂಡ ನಿರ್ಣಯವಾಗಿತ್ತು. ಪ್ರಜಾಪ್ರಭುತ್ವದ ವಿಚಾರಧಾರೆಗಳನ್ನು ಅತ್ಯಂತ ಸರಳವಾಗಿ ಕನ್ನಡ ಭಾಷೆಯಲ್ಲಿ ವಚನಗಳ ಮೂಲಕ ಮಾನವ ಬದುಕಿಗೆ ದಾರಿದೀಪವಾಗಿ ನೀಡಿದವರು ಬಸವಾದಿ ಶರಣರು. ಅನುಭವ ಮಂಟಪ ಭಾರತದ ಮೊದಲ ಸಂಸತ್ತು. ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಸರಕಾರ ತಂದ ಖ್ಯಾತಿ ಅನುಭವ ಮಂಟಪದ ಶರಣರಿಗೆ ಸಲ್ಲುತ್ತದೆ ಎಂದರು. ಮುಖ್ಯ ಅತಿಥಿಗಳಾದ ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್, ದಾವಣಗೆರೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕರಿಬಸಪ್ಪ ಸ್ವಾಮಿ, ಅಖಿಲ ಭಾರತವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ ಎಚ್.ವಿ.ಶಿವಪ್ಪ ಹಾಗೂ ಸುಪ್ರಜ ಗುರುಕುಲ ಅಧ್ಯಕ್ಷೆ ಡಿ.ಸುಜಲಾ ದೇವಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶರಣ ಮಾಗನೂರು ಬಸಪ್ಪನವರ ಆತ್ಮಚರಿತ್ರೆ ಕೃತಿಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿ ಎಚ್.ವಿ.ಶಿವಪ್ಪ ಅವರಿಗೆ ಶರಣ ಸಂಸ್ಕೃತಿ ಪ್ರಚಾರಕ ಸನ್ಮಾನ ಮಾಡಿ ಗೌರವಿಸಲಾಯಿತು.ಸಾಹಿತಿ ಜಲಜಾ ಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ಕರಿಬಸಪ್ಪ ಹಾಗೂ ಸುಪ್ರಜ ಗುರುಕುಲ ಅಧ್ಯಕ್ಷೆ ಡಿ.ಸುಜಲಾ ದೇವಿ ಅವರನ್ನು ಸನ್ಮಾನಿಸಲಾಯಿತು.  ಶನಿವಾರಸಂತೆ ಹೋಬಳಿ ಕಸಾಪ ಅಧ್ಯಕ್ಷ ಬಿ.ಬಿ.ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯದರ್ಶಿ ಎಂ.ಪಿ.ಮೋಹನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಶ.ಗ.ನಯನತಾರಾ, ಕಾಫಿ ಬೆಳೆಗಾರ ಎಸ್.ಎಂ.ಮಹೇಶ್, ಕಸಾಪ ಪ್ರಮುಖ ಪದಾಧಿಕಾರಿಗಳಾದ ಜೆ.ಸಿ.ಶೇಖರ್, ಸಿ.ಎಂ. ಪುಟ್ಟಸ್ವಾಮಿ, ಎ.ಪಿ.ವೀರರಾಜು, ಕೆ.ಪಿ.ದಿನೇಶ್, ಸುಬ್ರಹ್ಮಣ್ಯ, ವೆಂಕಟ್ ನಾಯಕ್, ಪ್ರಕಾಶ್ಚಂದ್ರ, ಕೆ.ಪಿ.ಜಯಕುಮಾರ್, ಎಸ್.ಆರ್.ಶಿವಪ್ಪ,, ಎಂ.ಎನ್ ಮೂರ್ತಿ, ಶಾಂತಮಲ್ಲಪ್ಪ, ಕೇಶವಮೂರ್ತಿ, ರಾಮಕುಮಾರ್, ಭಗವಾನ್ ಗೌಡ, ಶಿವಕುಮಾರ್, ಆಶಾಪುಟ್ಟಸ್ವಾಮಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಸಾಪ ಕಾರ್ಯದರ್ಶಿ ಮೋಹನ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಕೆಂಚಮ್ಮ ನಿರೂಪಿಸಿದರು, ಸುಜಲಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.