ಮಡಿಕೇರಿ ಮಾ.3 NEWS DESK : ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರದ ಕ್ರಿಯೇಟಿವ್ ಸಂಸ್ಥೆಯ ಮಾಲೀಕ ಖಲೀಲ್ ಮಾತನಾಡಿ, ಶಿಕ್ಷಣ ಎಂಬುದು ಮಾನವನ ಜೀವನದಲ್ಲಿ ಯಾರೂ ಕದಿಯಲಾಗದ ಸಂಪತ್ತು. ಶಿಕ್ಷಣ ಮಾನವನ ಸರ್ವಾಂಗಿನ ಅಭಿವೃದ್ಧಿಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಭಯ ಆತಂಕ ಪಡದೆ ಗುರುಗಳು ಮಾಡಿರುವ ಪಾಠ ಪ್ರವಚನಗಳನ್ನು ನೆನಪಿಟ್ಟುಕೊಂಡು ಉತ್ತಮವಾಗಿ ಪರೀಕ್ಷೆಯನ್ನು ಹಬ್ಬದಂತೆ ಸಂತೋಷದಿಂದ ಬರೆಯ ಬೇಕು ಎಂದರು. ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನುಗಳಿಸುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ನೀಡಿ ಶುಭ ಕೋರಿದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಉದೇರಿ ರಾಜೇಂದ್ರ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ನೀಡಿರುವ ಶಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ರೂಪಿಸಿಕೊಳ್ಳಬೇಕು ಕರೆ ನೀಡಿದರು. ಕಾಲೇಜು ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ ಪರೀಕ್ಷೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಮತ್ತು ಪರೀಕ್ಷೆಗೆ ಹೋಗುವಾಗ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳಬಗ್ಗೆ ಮಾಹಿತಿ ನೀಡಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ವಾಣಿ, ಪರಶುರಾಮಪ್ಪ, ಕನ್ನಡ ಉಪನ್ಯಾಸಕ ಶ್ರೀನಿವಾಸ್ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಯೋಗಿತ ಹಾಜರಿದ್ದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ, ಶುಭ ಕೋರಲಾಯಿತು.











