Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಹಕ್ಕಿ ಜ್ವರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಹಕ್ಕಿ ಜ್ವರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ*

ಮಾರ್ಚ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.4 NEWS DESK : ಹಕ್ಕಿಜ್ವರ ಅಥವಾ ಕೋಳಿ ಜ್ವರ ಶೀತಜ್ವರ ಹೆಚ್5ಎನ್1 ವೈರಸ್ ನಿಂದ ಹರಡುವ ರೋಗ ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ಖಾಯಿಲೆಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ.
ರೋಗ ಲಕ್ಷಣಗಳು: ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್|ಎನ್1 ಜ್ವರದ ಲಕ್ಷಣಗಳಂತೆಯೇ ಇರುತ್ತದೆ. ಜ್ವರ ಮತ್ತು ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು. ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.
ಮುನ್ನೆಚ್ಚರಿಕೆ ಕ್ರಮಗಳು: ಹಕ್ಕಿಜ್ವರ ಪೀಡಿತ ಪ್ರದೇಶಗಳಲ್ಲಿ ನಾಗರಿಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಹಕ್ಕಿಜ್ವರದ ಸೋಂಕು ಹರಡದಂತೆ ತಡೆಯಬಹುದು. ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸುವುದು. ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು. ಹಕ್ಕಿ ಜ್ವರ ಶಂಕಿತ ಅಥವಾ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು. ಹಕ್ಕಿ ಜ್ವರ ಹರಡಿರುವ ಫಾರಂನ ವಾತಾವರಣದ ಸಂಪರ್ಕಕ್ಕೆ ಬಂದಲ್ಲಿ ತಕ್ಷಣ ತಮ್ಮ ಕೈಕಾಲು ಮತ್ತು ಮುಖವನ್ನು ತೊಳೆದುಕೊಂಡು ಬಟ್ಟೆಯನ್ನು ಬದಲಾಯಿಸಿಕೊಳ್ಳುವುದು ಮತ್ತು ಮುಂದಿನ ನಾಲ್ಕು ದಿನಗಳವರೆಗೆ ತಮ್ಮ ದೇಹದ ಉಷ್ಣಂಶದಲ್ಲಾಗುವ ಬದಲಾವಣೆಗಳನ್ನು ಗಮನಿಸುವುದು. ಒಂದು ವೇಳೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು. ಸೋಂಕಿರುವ ಪ್ರದೇಶಗಳಲ್ಲಿ ಯಾವುದೇ ವಸ್ತುವನ್ನು ಮುಟ್ಟಿದಾಗ ಯಾವಾಗಲೂ ಕೈಗಳನ್ನು ಸೋಪಿನಿಂದ ತೊಳೆಯಬೇಕು.
ಕೋಳಿ ಮಾಂಸದ ಸೇವನೆಯಿಂದ ಹಕ್ಕಿ ಜ್ವರ ಬರುವುದಿಲ್ಲ: ಕೋಳಿ ಮಾಂಸ ಅಥವಾ ಕೋಳಿ ಮೊಟ್ಟೆ ಸೇವಿಸುವುದರಿಂದ ಈ ಖಾಯಿಲೆ ಮನುಷ್ಯರಲ್ಲಿ ಬರುವುದಿಲ್ಲ, ಆದರೆ ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆ ಇದೆ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‍ಗೂ ಅಧಿಕ ಉಷ್ಣಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು ಅಡುಗೆಗಾಗಿ ಕೋಳಿ ಮಾಂಸ ಸಿದ್ಧಪಡಿಸಿದ ನಂತರ ಕೈಗಳನ್ನು ನಂಜು ನಾಶಕದಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆ ಸೇವಿಸಬಾರದು. ಹಕ್ಕಿ ಜ್ವರ ಸಾಂಕ್ರಾಮಿಕ ರೋಗ ಮುನ್ನೆಚ್ಚರಿಕೆಯಿಂದ ತಡೆಯಬಲ್ಲ ಖಾಯಿಲೆ. ಆದ್ದರಿಂದ ಖಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಡಾ.ಸತೀಶ್ ಕುಮಾರ್ ಸಲಹೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.