Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಲೆ ಗೋಡೆಯಲ್ಲಿ ವರ್ಲಿ ಚಿತ್ತಾರ : ಸರ್ಕಾರಿ ಶಾಲೆಗೆ ಹೊಸ ರೂಪಕೊಟ್ಟ ಜಾಗೃತಿ ಸಂಸ್ಥೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಲೆ ಗೋಡೆಯಲ್ಲಿ ವರ್ಲಿ ಚಿತ್ತಾರ : ಸರ್ಕಾರಿ ಶಾಲೆಗೆ ಹೊಸ ರೂಪಕೊಟ್ಟ ಜಾಗೃತಿ ಸಂಸ್ಥೆ*

ಮಾರ್ಚ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮಾ.4 NEWS DESK : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯನ್ನು ತಲುಪಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ದಾನಿಗಳು, ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯಿಂದ ನೆರವು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುತ್ತಿದ್ದು, ಶಾಲೆಯ ಆವರಣ, ಗೋಡೆಯನ್ನು ಸ್ವಚ್ಛಗೊಳಿಸಿ ವರ್ಲಿ ಚಿತ್ರಗಳನ್ನು ಬಿಡಿಸುವ ಮೂಲಕ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದೆ. ಬೆಂಗಳೂರು ಮೂಲದ ಜಾಗೃತಿ ಸಮಾಜ ಸೇವಾ ಟ್ರಸ್ಟ್ ಮತ್ತು ಸಿಸ್ಕೊ ಸಂಸ್ಥೆಯ ಸಹಯೋಗದ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಗೋಡೆಯಲ್ಲಿ ವರ್ಲಿ ಚಿತ್ರಕಲೆ, ಸಾಮಾಜಿಕ ಮೌಲ್ಯ, ಪರಿಸರ ಕಾಳಜಿಯ ರೇಖಾ ಚಿತ್ರಗಳು, ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ಸ್ಥಳದಲ್ಲಿಯೇ ತಯಾರಿಸುವ ವಿಧಾನ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಸಾಮಾಗ್ರಿಗಳಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದೆ. ಎರಡು ದಿನಗಳ ಕಾಲ ನಡೆದ ಸೇವಾ ಕಾರ್ಯಕ್ರಮದಲ್ಲಿ ಸಿಸ್ಕೋ ಮತ್ತು ಜಾಗೃತಿ ಸೇವಾ ಟ್ರಸ್ಟ್ ನ 20 ಮಂದಿ ಸ್ವಯಂ ಸೇವಕರು ಭಾಗವಹಿಸಿದ್ದರು. ಶಾಲೆಯ ಆವರಣ, ಗೋಡೆ ಸೇರಿದಂತೆ ಶಾಲಾ ಮೈದಾನಕ್ಕೆ ತೆರಳುವ ರಸ್ತೆಯ ಬದಿಯ ಗೋಡೆಗಳ ಮೇಲೆ ವರ್ಲಿ ಚಿತ್ರಕಲೆ, ಸಾಮಾಜಿಕ ಕಳಕಳಿಯನ್ನು ಬಿಂಬಿಸುವ ಚಿತ್ರಕಲೆಗಳನ್ನು ಬಿಡಿಸಿ ಗೋಡೆಗಳ ಅಂದವನ್ನು ದ್ವಿಗುಣಗೊಳಿಸಿದರು. ಶಾಲೆಯ ವಿದ್ಯಾರ್ಥಿಗಳೊಂದಿಗೆ ಬೆರೆತು ಸಂವಾದ ಮತ್ತು ಸ್ಥಳದಲ್ಲೇ ಶೈಕ್ಷಣಿಕ ಪ್ರಗತಿಗಾಗಿ ಚಾರ್ಟ್ ತಯಾರಿಸುವ ವಿಧಾನಗಳನ್ನು ಹೇಳಿಕೊಟ್ಟರು. ಈ ಸಂದರ್ಭ ಜಾಗೃತಿ ಸೇವಾ ಟ್ರಸ್ಟ್ ನ ಕಾರ್ಯದ್ಯಕ್ಷರಾದ ಕಣ್ಣನ್ ಆರ್  ಮಾತನಾಡಿ, ಕೊಡಗು ಮೂಲದ ರೇಣು ಅಪ್ಪಚ್ಚು ಅವರು ಶಾಂತಿ ದೂತರು, ವಿಶ್ವ ಶಾಂತಿಗಾಗಿ ತ್ಯಾಗಮಹಿ ನೋಬೆಲ್ ಪ್ರಶಸ್ತಿ ಗಳಿಸಿದ ದಿ.ಮದರ್ ತೆರೇಸಾ ಅವರಿಂದ ಪ್ರೇರೆಪಿತರಾಗಿ ಬೆಂಗಳೂರು ಮಾಹಾನಗರದ ಹೊರ ವಲಯದಲ್ಲಿ 1996 ರಲ್ಲಿ ಸಾಮಾಜಿಕ ಕಳಕಳಿಯ ಮನೋ ಉದ್ದೇಶದಿಂದ ಸ್ಥಾಪನೆಯಾದ ಸಂಸ್ಥೆ ಜಾಗೃತಿ ಸೇವಾ ಸಂಸ್ಥೆ. ಸೇವಾ ಸಂಸ್ಥೆಯು ಬೆಂಗಳೂರಿನ ನಾನಾ ಭಾಗಗಳಲ್ಲಿ ಸಂತ್ರಸ್ತ ಮಕ್ಕಳ ಮತ್ತು ಮಹಿಳೆಯ ಹಾಗೂ ನಿರ್ಗತಿಕ ವೃದ್ದರಿಗಾಗಿ ಪುನರ್ವಸತಿ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಇದಲ್ಲದೆ ಎರಡು ಆರೋಗ್ಯ ಕೇಂದ್ರಗಳು, ಯುವ ಸಮುದಾಯಕ್ಕೆ ದಾರಿ ದೀಪವಾಗುವ ನಿಟ್ಟಿನಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳು, ಅಪ್ತ ಸಮಾಲೋಚನೆ ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. 2018 ರಲ್ಲಿ ಕೊಡಗು ಜಿಲ್ಲೆಯ ಸಂಭವಿಸಿದಪ್ರಾಕೃತಿಕ ವಿಕೋಪ ತುರ್ತು ಪರಿಸ್ಥಿತಿಯಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸತತ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯ ನಾನಾ ಭಾಗಗಳಲ್ಲಿರುವ ಶಾಲೆಗಳಲ್ಲಿ ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತನ್ನ ಕಲಿಕ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಿಸ್ಕೋ ಕಂಪನಿಯ ಪ್ರಮುಖರು ಮತ್ತು ಸ್ಥಳೀಯರಾದ ಮಚ್ಚಾರಂಡ ಅಯ್ಯಪ್ಪ  ಮಾತನಾಡಿ ಖಾಸಗಿ ಶಾಲೆಗಳಲ್ಲಿರುವ ಆಧುನಿಕ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿಲ್ಲ. ಆಧುನಿಕ ಬದುಕಿಗೆ ಹೊಂದಿಕೊಂಡಿರುವ ಪ್ರಸ್ತುತ ಜನತೆಯು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸಿ ತಾವು ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ ಎಂದು ತಿಳಿದುಕೊಳ್ಳುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಸಾವಿರಾರು ಮಂದಿ ಉನ್ನತ ಮಟ್ಟದ ಸ್ಥಾನಮಾನ ಪಡೆದು ಜೀವನ ಕಂಡುಕೊಂಡಿದ್ದಾರೆ. ನಾವು ಕಲಿತ ಶಾಲೆಗೆ ಪರೋಪಕಾರ ಮಾಡುವ ಮನೋಭಾವ ನಮ್ಮದಾಗಬೇಕು.  ಶಾಲೆಯ ಗುಣಮಟ್ಟ ಉತ್ತಮವಾಗಲು ಸ್ಥಳೀಯರ ಸಹಕಾರ, ಸಂಘ ಸಂಸ್ಥೆಗಳ ಸಹಕಾರ ಹಣದ ಕ್ರೋಡೀಕರಣದೊಂದಿಗೆ ಶಾಲೆಯ ಅಭಿವೃದ್ಧಿ ಸಾದ್ಯ ಎಂದು ಹೇಳಿದರು. ಸಿಸ್ಕೋ ಸಂಸ್ಥೆಯ  ಸಂಪತ್ ಬಾನಂಡ, ಪವನ್ ಪ್ರಶಾಂತ್, ಜಾಗೃತಿ ಟ್ರಸ್ಟ್ ನ ಕೋಶಾಧಿಕಾರಿಗಳಾದ ಕೊಂಡಿಂಜಮ್ಮಂಡ ಶರಣು, ನೋಯಲ್, ಜಾಗೃತಿ ಟ್ರಸ್ಟ್ ನ ಸಂಸ್ಥಾಪಕರಾದ ರೇಣು ಅಪ್ಪಚ್ಚು, ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್.ಸೋಮಕ್ಕ, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವರದಿ : ಟಿ.ಜೆ. ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.