
ಮಡಿಕೇರಿ ಮಾ.4 NEWS DESK : ಕರ್ನಾಟಕದಲ್ಲಿ ಕನ್ನಡ ಪರ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶದಿಂದ ಕೊಡಗು ಜಿಲ್ಲೆಯಲ್ಲಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಿಸಲಾಗಿದ್ದು, ಕನ್ನಡ ಭವನದ ಕೊಡಗು ಜಿಲ್ಲಾ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕವಯತ್ರಿ, ಸಂಘಟಕಿ ಎಂ.ಎ.ರುಬೀನಾ ಅವರನ್ನು ಕೊಡಗು ಜಿಲ್ಲಾಧ್ಯಕ್ಷೆಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅನುಮೋದಿಸಿದರು. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಪೆರಿಯಂಡ ಯಶೋಧ, ಬೊಟ್ಟೋಳಂಡ ನಿವ್ಯಾ ಕಾವೇರಮ್ಮ, ಕೋಶಾಧಿಕಾರಿಯಾಗಿ ಚಂದನ್ ನಂದರಬೆಟ್ಟು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕರವಂಡ ಸೀಮಾ ಗಣಪತಿ, ಪಳಂಗೀಯಂಡ ಶರತ್ ಬೋಪಣ್ಣ, ಕಿಶೋರ್ ರೈ ಕತ್ತಲೆಕಾಡು, ಕೆ.ಎ.ಸಂಕೇತ್ , ಹೇಮಂತ್ ಪಾರೇರ, ಪಂದ್ಯoಡ ರೇಣುಕಾ ಸೋಮಯ್ಯ, ಅಮ್ಮಾಟoಡ ವಿಂದ್ಯಾ ದೇವಯ್ಯ, ಮೊಣ್ಣಂಡ ವಿನು ಕಾರ್ಯಪ್ಪ, ಕಾಣತಂಡ ಭವ್ಯ ದೇವಯ್ಯ, ಉಡುವೆರ ರೇಖಾ ರಘು ಅವರನ್ನು ಆಯ್ಕೆ ಮಾಡಿ ಸಮಿತಿಯನ್ನು ರಚಿಸಿದ್ದಾರೆ. ಮಾರ್ಚ್ ಕೊನೆಯ ವಾರದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಕೇಂದ್ರದಲ್ಲಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಗೌರವ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸ್ಥಾಪಕ ಸಂಚಾಲಕರಾದ ಡಾ.ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಕನ್ನಡ ಭವನ ರೂವಾರಿಯಾದ ಡಾ.ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಸ್ಥಾಪಿಸಿದ, ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಗಳಿಂದ ಲಾಂಚನ ಬಿಡುಗಡೆಗೊಳಿಸಿ, ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರಿಂದ ವಿದ್ಯುಕ್ತವಾಗಿ ಕನ್ನಡ ಧ್ವಜ ನೀಡಿ ಉದ್ಘಾಟನೆಗೊಂಡ ಪರಿಷತ್ತು ಆಗಿದ್ದು, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡಿನಲ್ಲಿ ಸಾಹಿತಿ, ಪತ್ರಕರ್ತ ವಿರಾಜ್ ಅಡೂರ್ ಅಧ್ಯಕ್ಷರಾಗಿ ಸಮಿತಿ ವಿಸ್ತರಿಸಿ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಕಾರ್ಯಪ್ರವೃತವಾಗಿದೆ.








