
ಮಡಿಕೇರಿ ಮಾ.4 NEWS DESK : ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 78 ವಿದ್ಯಾರ್ಥಿಗಳಿಗೆ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉಚಿತ ಸ್ವೆಟರ್ ವಿತರಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಾದ್ಯಂತ 90,000 ಮಕ್ಕಳಿಗೆ ಸ್ವೆಟರ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಂದಿನ ಮಳೆಗಾಲ ಮತ್ತು ಚಳಿಗಾಲದಲ್ಲಿ ಶಾಲೆಯ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರಿ ಶಾಲೆಯ ಮಕ್ಕಳು ಬಡ ಕುಟುಂಬದಿಂದ ಬಂದವರಾಗಿದ್ದು, ಎಲ್ಲರೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇವರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರದೀಪ್, ಗ್ರಾ.ಪಂ ಅಧ್ಯಕ್ಷ ಅರುಣ ಕುಮಾರಿ, ಸದಸ್ಯ ಚಂದ್ರಶೇಖರ ಜೋಗಿ, ತೊರೆನೂರು ಗ್ರಾ.ಪಂ ಅಧ್ಯಕ್ಷೆ ಶೋಭಾ ತೊರೆನೂರು ಪಂಚಾಯತಿಯ ಮಾಜಿ ಅಧ್ಯಕ್ಷ ದೇವರಾಜು, ರೂಪ ಮಹೇಶ್, ಉಪಾಧ್ಯಕ್ಷರಾದ ಬೇಬಿ ಹೆಬ್ಬಾಲೆ, ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಂ.ವೆಂಕಟೇಶ, ಸಹ ಶಿಕ್ಷಕಿ ಜಾನಕಿ, ಬಬಿತ, ವಂಜಮ್ಮ, ರಮ್ಯಾ, ಶಿವಾನಂದ ಸೇರಿದಂತೆ ಗ್ರಾಮಸ್ಥರು, ಶಾಲಾ ಮಕ್ಕಳು ಹಾಜರಿದ್ದರು. ಶಾಲಾ ಶಿಕ್ಷಕಿ ಪುಷ್ಪಾವತಿ ಸ್ವಾಗತಿಸಿದರು.









