
ಮಡಿಕೇರಿ ಮಾ.4 NEWS DESK : ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ, 1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜುಗಳನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಆರ್ಥಿಕ ಇಲಾಖೆಗೆ ಮರು ಪ್ರಸ್ತಾವನೆ ಸಲ್ಲಿಸಿ ಸರ್ಕಾರದ ಅನುದಾನಕ್ಕೆ ಒಳಪಡಿಸಲುಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾವೇರಿ ಕಾಲೇಜಿನ ಅಧ್ಯಕ್ಷ ಸುವರ್ಣ ಮುತ್ತಣ್ಣ, ಕೆ.ಜಿ. ಗೋಪಾಲಕೃಷ್ಣ ಭಟ್, ಡಾ.ಅಕ್ರಂ, ಚೇತನ್ ಚಿನ್ನಪ್ಪ ಉಪಸ್ಥಿತರಿದ್ದರು.









