
ವಿರಾಜಪೇಟೆ ಮಾ.5 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಆದೇಶದ ಮೇರೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ನಿಯಂತ್ರಣದ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.
ಸಮಿತಿಯ ಪದಾಧಿಕಾರಿಗಳು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಸರಕಾರಿ ಶಾಲೆಗಳು ಮತ್ತು ಸರಕಾರಿ ಹಾಸ್ಟೆಲ್‍ಗಳು ಮತ್ತು ಸಾರ್ವಜನಿಕರ ಸ್ಥಳಗಳಲ್ಲಿ ಹಾಡಿನ ಮೂಲಕ ಅರಿವು ಮೂಡಿಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಮಂಜುನಾಥ್ ಅಣ್ಣಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಂಚಾಲಕ ಹೆಚ್.ಜಿ.ಗೋಪಾಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.









