


ವಿರಾಜಪೇಟೆ ಮಾ.5 NEWS DESK : ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಕೆ.ಪಿ.ದಿಥ್ಯಗೆ ಕನ್ನಡ ಮಾಣಿಕ್ಯ ಪ್ರಶಸ್ತಿ ಲಭಿಸಿದೆ. ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಕೆ.ಪಿ.ದಿಥ್ಯಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿರಾಜಪೇಟೆಯ ಚಿಕ್ಕಪೇಟೆಯ ನಿವಾಸಿ ಕೆ.ಪಿ. ಪ್ರಥ್ವಿಕುಮಾರ್ ಹಾಗೂ ಭವ್ಯ ದಂಪತಿಗಳ ಪುತ್ರಿಕೊಂಪುಳೀರ ಪಳಂಗಪ್ಪ ಹಾಗೂ ತಾರಾಮಣಿಯವರ ಮೊಮ್ಮಗಳಾಗಿರುವ ದಿಥ್ಯ, ವಿರಾಜಪೇಟೆಯ ವಿನಾಯಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಾಟ್ಯಾಂಜಲಿ ನೃತ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾಳೆ.