


ಗುಂಡ್ಲುಪೇಟೆ NEWS DESK ಮಾ.5 : ಕಾಡಾನೆ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಡೀಪುರದ ಕುಂದಕೆರೆ ವಲಯ ವ್ಯಾಪ್ತಿಯ ಹಾಡಿನ ಕಣಿವೆ-ಮಂಗಲ ರಸ್ತೆಯಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ಮಸಣಿಗುಡಿ ಮೂಲದ ಕರಿಯ(48) ಎಂಬುವವರೇ ಮೃತ ದುರ್ದೈವಿ. ಕರಿಯ ಸೇರಿದಂತೆ ಮೂವರು ಮಂಗಲ ಗ್ರಾಮದ ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಈ ಸಂದರ್ಭ ಕಾಡಾನೆಗೆ ಸಿಲುಕಿಕೊಂಡ ಕರಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದವರು ಓಡಿ ಜೀವ ಉಳಿಸಿಕೊಂಡಿದ್ದಾರೆ. ಬಂಡೀಪುರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.