Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ರಚಿತ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ರಚಿತ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಬಿಡುಗಡೆ*

ಮಾರ್ಚ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಮಂಗಳೂರಿನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾ ಭವನದಲ್ಲಿ ಡಾ.ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರವಾದ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆದ 42ನೇ ಸರಣಿ ಕೃತಿ ಲೋಕಾರ್ಪಣೆಯ ಸರಳ ಕಾರ್ಯಕ್ರಮದಲ್ಲಿ “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕವನ್ನು ಯು.ಎ.ಇ. ಬಂಟ್ಸ್ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಕಡಲಾಚೆಯ ರಮ್ಯ ನೋಟ ದುಬಾಯಿ” ಪುಸ್ತಕ ಅತ್ಯಂತ ವಿಶಿಷ್ಟ ಶೈಲಿಯಲ್ಲಿ ರಚನೆಗೊಂಡಿದ್ದು, ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಅತ್ಯಾಕರ್ಷಕ ವರ್ಣ ಚಿತ್ರದೊಂದಿಗೆ ಓದುಗರ ಮನಮುಟ್ಟುವಲ್ಲಿ ಕೃತಿ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಲಾಚೆಯ ರಮ್ಯ ನೋಟ ದುಬಾಯಿ ಕೃತಿಗೆ ಮುನ್ನುಡಿಯನ್ನು ಬರೆದಿರುವ ಡಾ.ಅರುಣ ನಾಗರಾಜ್ ಮಾತನಾಡಿ ಪುಸ್ತಕದಲ್ಲಿರುವ ಲೇಖನಗಳು ಸಂಪೂರ್ಣ ಮಾಹಿತಿಯೊಂದಿಗೆ ಓದುಗರ ಮನ ಗೆಲ್ಲುತ್ತಿದೆ. ಕೈಯಲ್ಲಿ ಈ ಒಂದು ಕೃತಿ ಇದ್ದರೆ ಸಮಗ್ರ ದುಬಾಯಿಯನ್ನು ಸಂಪೂರ್ಣವಾಗಿ ಪ್ರವಾಸ ಮಾಡಿಕೊಂಡು ಬಂದಿರುವ ಅನುಭವಾಗುತ್ತದೆ ಎಂದು ಶ್ಲಾಘಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಾತನಾಡಿ ವಿದೇಶದ ನೆಲದಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಗಣೇಶ್ ರೈ ಅವರ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯರಾದ ಸರ್ವೋತ್ತಮ ಶೆಟ್ಟಿ ಅವರು ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಗಣೇಶ್ ರೈ ಅವರು ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಯು.ಎ.ಇ. ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಮೂಲಕ ಕರ್ನಾಟಕ ರಾಜ್ಯದ ಕಲೆ, ಭಾಷೆ, ಸಂಸ್ಕೃತಿಯನ್ನು ಕಳೆದ ಎರಡೂವರೆ ದಶಕಗಳಿಂದ ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ಶಿಲ್ಪಿಯಾಗಿ, ಚಿತ್ರಕಾರರಾಗಿ, ಕಾರ್ಯಕ್ರಮ ನಿರೂಪಕರಾಗಿ ಸಮಾಜ ಸೇವಕರಾಗಿ, ಬಹುಮುಖ ಪ್ರತಿಭೆಯ ವ್ಯಕ್ತಿತ್ವವನ್ನು ಹೊಂದಿರುವ ಗಣೇಶ್ ರೈ ಅವರು ಬರಹಗಾರರಾಗಿ ಅನೇಕ ಲೇಖನಗಳನ್ನು ಬರೆದಿದ್ದಾರೆ, ನೂರಾರು ಗಣ್ಯರ ಸಂದರ್ಶನ ಮಾಡಿದ್ದಾರೆ. ಇದೀಗ ದುಬಾಯಿಯ ಸಂಪೂರ್ಣ ಚಿತ್ರಣವಿರುವ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿಯನ್ನು ಪ್ರಕಟಿಸಿರುವುದು ದುಬಾಯಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಗೆ ಸಂದಿರುವ ಗೌರವ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರ ಶಿಲ್ಪ ಕಲಾವಿದ ಹಾಗೂ ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿಯ ಲೇಖಕ ಗಣೇಶ್ ರೈ ಮಾತನಾಡಿ ಮೂಲತ: ಕೊಡಗಿನವನಾದ ನಾನು ಪ್ರಸ್ತುತ ದುಬಾಯಿಯಲ್ಲಿ ನೆಲೆಸಿದ್ದು, ದುಬಾಯಿಯನ್ನು ಪರಿಚಯಿಸುವ ಹಲವು ದಿನಗಳ ನನ್ನ ಕನಸು ಈ ಕೃತಿಯ ಮೂಲಕ ನನಸಾಗಿದೆ ಎಂದರು. ನನ್ನ ಲೇಖನಗಳನ್ನು ಪ್ರಕಟಿಸಿ ಸದಾ ಪ್ರೋತ್ಸಾಹ ನೀಡುತ್ತಿರುವ ಮಾಧ್ಯಮಗಳು ಹಾಗೂ ಕಲೆಗೆ ಸ್ಫೂರ್ತಿ ತುಂಬುತ್ತಿರುವ ಸಂಘ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ‘ಕಡಲಾಚೆಯ ರಮ್ಯ ನೋಟ ದುಬಾಯಿ’ ಕೃತಿಯ ಮೊದಲ ಪ್ರತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಗೆ ಅರ್ಪಣೆ ಮಾಡಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಾದ ಪಡೆದಿದ್ದೇನೆ.  ಮೂಡಬಿದ್ರೆ ಆಳ್ವಾಸ್ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಡಾ.ಮೋಹನ್ ಆಳ್ವ ಅವರಿಗೂ ಪುಸ್ತಕವನ್ನು ತಲುಪಿಸಿ ಶುಭ ಸಂದೇಶವನ್ನು ಪಡೆದುಕೊಂಡಿರುವುದಾಗಿ ಗಣೇಶ್ ರೈ ತಿಳಿಸಿದರು. ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣದಲ್ಲಿ ಕೃತಿಯ ಕುರಿತು ಮಾಹಿತಿ ನೀಡಿದರು. ಸುರೇಖಾ ಯಳವಾರ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.