


ಮಡಿಕೇರಿ ಮಾ.5 NEWS DESK : ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು ಎಂದು ಗೋಣಿಕೊಪ್ಪ ಪೊಲೀಸರು ಸೂಚಿಸಿದ್ದಾರೆ. ಗೋಣಿಕೊಪ್ಪ ಠಾಣೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ವಾಹನ ಚಲಾಯಿಸುವಾಗ ಅನುಸರಿಸಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ವಾಹನ ಚಾಲನೆಯ ಸಮಯದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ತಿಳಿಸಿದ ಅಧಿಕಾರಿಗಳು ಮಕ್ಕಳಿಗೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಲಹೆ ನೀಡಿದರು.