


ಮಡಿಕೇರಿ ಮಾ.5 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಹೆಚ್ಚಿಸಲು ಅಭಿಯಾನಕ್ಕೆ ತೀರ್ಮಾನಿಸಿದ್ದು, ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಘದ ಸದಸ್ಯತ್ವವನ್ನು ಹೆಚ್ಚಿಸುವ ಸಲುವಾಗಿ ಅಭಿಯಾನವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿತ್ತು. ಅಂತಯೇ ಅಭಿಯಾನವನ್ನು ಆರಂಭಿಸಲಾಗಿದ್ದು, ಹಳೆ ವಿದ್ಯಾರ್ಥಿ ಸಂಘದ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಅನ್ನು ಪಡೆದುಕೊಳ್ಳಲಾಗಿದೆ. ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಖಾತೆಗೆ ನೇರ ಹಣವನ್ನು ಜಮಾ ಮಾಡಿ ಅದರ ರಶೀದಿ ಅಥವಾ ಸ್ಕ್ರೀನ್ ಶಾಟ್ ಅನ್ನು ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಅವರ ಮೊಬೈಲ್ ಸಂಖ್ಯೆ 8762632314 ಅಥವಾ ಕಾಲೇಜಿನ ಸಿಬ್ಬಂದಿ ಹೇಮಾ 7829776447 ಇವರ ವಾಟ್ಸ್ ಆ್ಯಪ್ ಸಂಖ್ಯೆಗೆ ಕಳುಹಿಸುವುದರ ಮುಖಾಂತರ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. 1949ರಲ್ಲಿ ಪ್ರಾರಂಭವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಈಗಾಗಲೇ 75 ವರ್ಷ ತುಂಬಿದ್ದು, ವಜ್ರ ಮಹೋತ್ಸವದ ಹೊಸ್ತಿಲಿನಲ್ಲಿದೆ. ಇದರ ಪ್ರಯುಕ್ತವಾಗಿ ಕಾಲೇಜಿನೊಂದಿಗೆ ಕೈ ಜೋಡಿಸಿ, ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ತೀರ್ಮಾನಿಸಲಾಗಿದೆ. ಜೊತೆಗೆ ಸಂಘದಿಂದ ಕಾಲೇಜಿನ ಡಿಜಿಟಲ್ ಲೈಬ್ರರಿಗೆ, ವಿದ್ಯಾರ್ಥಿಗಳ ಸ್ಫೋಟ್ರ್ಸ್ ಕಿಟ್‍ಗೆ ಧನ ಸಹಾಯ ನೀಡಿದ್ದು, ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಹಿನ್ನೆಲೆ ದಾನಿಗಳು ಕೈಜೋಡಿಸಿದರೆ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಸದಸ್ಯತ್ವ ಪಡೆಯಲು FMKMC HALEVDYARTHI SANGHA, Canara Bank west branch Madikeri, A. No: 1654101007803, IFSC code: CNRB0001654 ನಲ್ಲಿ ರೂ.1,000 ಹಣ ಪಾವತಿಸಿ ಸದಸ್ಯತ್ವ ಪಡೆಯಬಹುದು ಎಂದು ತಿಳಿಸಿದ್ದಾರೆ.