


ಮಡಿಕೇರಿ ಮಾ.6 NEWS DESK : ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರ 1 ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ ಸೈಟ್ https://kodagu.nic.in ರಲ್ಲಿ ಪಡೆದು ಭರ್ತಿಮಾಡಿ, ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ವಿಳಾಸಕ್ಕೆ ಅಂಚೆ/ ಟಪಾಲು ಮುಖೇನ ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿ ಹಾಗೂ DITC ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಶೈಕ್ಷಣಿಕ ವಿದ್ಯಾರ್ಹತೆ :: B.E. or B.Tech / BCA Stream : Computer Science or Information Science Enginnering, Electronic and Communication Telecom, ಅನುಭವ :: ಯಾವುದೇ ಸರ್ಕಾರಿ ಕಚೇರಿಯಲ್ಲಿ / ಕಂಪನಿ/ ಸಂಸ್ಥೆಗಳಲ್ಲಿ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರ (Freshers also can apply) ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :: 11.3.2025, ಸಂಜೆ 5.30 ಗಂಟೆಯೊಳಗೆ. 4 ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ ಸಕಾಲ ಮಿಷನ್ ನಿಂದ ನೀಡುವ ವೇತನ :: ರೂ. 27,100-/ (23,150+1800+1950+200) ಭಾರತೀಯ ನಾಗರಿಕರಾಗಿರಬೇಕು, ವಯೋಮಿತಿ ಕನಿಷ್ಟ 18 ಮತ್ತು ಗರಿಷ್ಠ 40 ವರ್ಷ. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ನೇಮಕಾತಿಯು ಕರ್ತವ್ಯ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರಬಾರದು, ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಅಂತಿಮ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಪೂರ್ವದಲ್ಲಿ ಯಾವುದೇ ಕಾರಣ ನೀಡದೆ ಈ ಆಯ್ಕೆ ಪ್ರಕ್ರಿಯೆ ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ಈ ಪ್ರಾಧಿಕಾರವು ಹೊಂದಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವಿಳಾಸಕ್ಕೆ ಕಚೇರಿ ಸಮಯದಲ್ಲಿ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಯ ಸ್ವ-ವಿವರ: 10ನೇ ತರಗತಿ ಅಂಕಪಟ್ಟಿ, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆ, ನೇಮಕಾತಿ ಆದೇಶ, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಕೊನೆಯ ದಿನಾಂಕದೊಳಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸುವುದು. ನಿಗದಿಪಡಿಸಿದ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.