


ಮಡಿಕೇರಿ ಮಾ.6 NEWS DESK : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್‍ಡಿಪಿಐ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಎಸ್‍ಡಿಪಿಐ ಪಕ್ಷದ ಜನಪರ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿ ಅವರ ಬಂಧನ ಕಾನೂನುಬಾಹಿರ ಕ್ರಮವಾಗಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಡೆಸಲಾಗುತ್ತಿರುವ ಹೋರಾಟ ಕೇಂದ್ರ ಸರ್ಕಾರದ ನಿದ್ದೆಗೆಡಿಸಿದೆ. ಹೋರಾಟವನ್ನು ಹತ್ತಿಕ್ಕುವ ಭಾಗವಾಗಿ ಎಸ್‍ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಮಾತನಾಡಿ ಎಸ್‍ಡಿಪಿಐ ಪಕ್ಷ ಜನಪರ ಹೋರಾಟದ ಕಾರ್ಯಕರ್ತರ ಪಕ್ಷವಾಗಿದೆ, ಒಬ್ಬ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಿದಾಕ್ಷಣ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಬೇಡಿಕೆ ಈಡೇರುವಲ್ಲಿಯವರೆಗೆ ಕಾರ್ಯಕರ್ತರ ಹೋರಾಟ ಮುಂದುವರೆಯಲಿದೆ ಎಂದರು. ಎಸ್‍ಡಿಪಿಐ ಪಕ್ಷದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಾಷಾ, ವಿರಾಜಪೇಟೆ ಕ್ಷೇತ್ರದ ಉಪಾಧ್ಯಕ್ಷ ಯೂಸುಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಶೀರ್ ಅಹ್ಮದ್, ಮಡಿಕೇರಿ ನಗರಾಧ್ಯಕ್ಷ ರಿಜ್ವಾನ್, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಆಲಿ, ನಗರಸಭಾ ಸದಸ್ಯ ಬಷೀರ್, ಕುಶಾಲನಗರ ಘಟಕದ ಅಧ್ಯಕ್ಷ ಝಕ್ರಿಯ, ಪ್ರಮುಖರಾದ ನಫೀಸ ಅಕ್ಬರ್, ವಿಮೆನ್ ಇಂಡಿಯಾ ಮೂಮೆಂಟ್ ಅಧ್ಯಕ್ಷೆ ಸಲಿಕತ್, ರಿಶಾನ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.