ಸೋಮವಾರಪೇಟೆ ಮಾ.7 NEWS DESK : ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತ್ವರಿತವಾಗಿ ತಯಾರು ಮಾಡುವ ಉದ್ದೇಶದಿಂದ ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಶಾಲೆಯಲ್ಲಿ ಮಾ.20 ರಿಂದ ಏ.17ರ ವರಗೆ ಬೇಸಿಗೆ ರಜದಿನದ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು, ಜಿಲ್ಲೆ ಮತ್ತು ಹೊರಜಿಲ್ಲೆಯ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿದರು. ನುರಿತ ಹಾಗೂ ಪ್ರತಿಭಾವಂತ ಉಪನ್ಯಾಸಕರು ತರಬೇತಿ ನೀಡಲಿದ್ದಾರೆ. ಕುವೆಂಪು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ. ಹೊರಗಿನ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಅವಶ್ಯಕತೆವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕೆಂದು ಉದ್ದೇಶದಿಂದ ಕುವೆಂಪು ವಿದ್ಯಾಸಂಸ್ಥೆಯನ್ನು 2003ರಲ್ಲಿ ಸ್ಥಾಪಿಸಲಾಯಿತು. ಪ್ರಸಕ್ತ ಶೇ.95 ರಷ್ಟು ವಿದ್ಯಾರ್ಥಿಗಳು ಕೃಷಿಕ ಕುಟುಂಬದ ಗ್ರಾಮೀಣ ಭಾಗದವರಾಗಿದ್ದಾರೆ. ಎಸ್‍ಎಸ್‍ಎಲ್‍ಸಿ ವಿಭಾಗದಲ್ಲಿ ಕಳೆದ 10 ವರ್ಷಗಳಿಂದ ಶೇ.100ರಷ್ಟು ಫಲಿತಾಂಶವನ್ನು ಸಂಸ್ಥೆ ಪಡೆಯುತ್ತಿದೆ. ಪಿಯು ವಾಣಿಜ್ಯ ವಿಭಾಗದಲ್ಲಿ ಕಳೆದ ವರ್ಷ ಶೇ.100ರಷ್ಟು ಫಲಿತಾಂಶಗಳಿಸಿದೆ. ಎರಡು ವರ್ಷದಿಂದ ಪಿಯು ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ. ಪಿಸಿಎಂಬಿ ವಿಭಾಗವಿದ್ದು, ಪ್ರಸಕ್ತ ಸಾಲಿನಿಂದ ಪಿಸಿಎಂಸಿ ವಿಭಾಗವನ್ನು ತೆರೆಯಲಾಗುವುದು. ಎಸ್‍ಎಸ್‍ಎಲ್‍ಸಿಯಲ್ಲಿ ಶೇ.98 ಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ವಿವರಿಸಿದರು. ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಾಣವಾಗಿರುವ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ಬೇಸಿಗೆ ಹಾಕಿ ತರಬೇತಿ ಶಿಬಿರವನ್ನು ಪರೀಕ್ಷೆಗಳು ಮುಗಿದ ತಕ್ಷಣ ನಡೆಸಲಾಗುವುದು ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ 8105970115, 7795630933 ಸಂಪರ್ಕಿಸಲು ಕೋರಿದೆ. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ.ಗಣಪತಿ, ಖಜಾಂಚಿ ಜಿ.ಪಿ.ಲಿಂಗರಾಜು, ನಿರ್ದೇಶಕರುಗಳಾದ ನಂದಕುಮಾರ್, ಶ್ರೀಹರಿ, ಪಾಪಯ್ಯ, ಉಪನ್ಯಾಸಕರಾದ ಲಾಂಛನ್ ಕಾರೇಕಾರ್, ರಜಿತ್ ಉಪ್ಥಿತರಿದ್ದರು.











