ವಿರಾಜಪೇಟೆ ಮಾ.7 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಶಿಬಿರ ಪ್ರಯುಕ್ತ ಸೆಂಟ್ ಆನ್ಸ್ ಪದವಿ ಕಾಲೇಜು ಎನ್ ಎಸ್ ಎಸ್ ಘಟಕ ಹಾಗೂ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಹೆಗ್ಗಳ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ವಿರಾಜಪೇಟೆ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ಪರೀಕ್ಷೆ ನಡೆಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳ, ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಶಿಬಿರಾರ್ಥಿಗಳು ಹಾಗೂ ಸಾರ್ವಜನಿಕರು ಉಚಿತ ಆರೋಗ್ಯ ಹಾಗೂ ದಂತ ತಪಾಸಣೆಯನ್ನು ಮಾಡಿಸಿಕೊಂಡರು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಹೇಮಪ್ರಿಯ, ಡಾ.ಶಮೀರ್, ಕೊಡಗು ದಂತ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ.ಅಸ್ಮಿನ್ ತಂಡವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ನಡೆಸಿತು. ಈ ಸಂದರ್ಭ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಶಾಲಾ ಮುಖ್ಯ ಶಿಕ್ಷಕರಾದ ಸುನೀತಾ, ಹೇಮಲತಾ, ಶಿಕ್ಷಕರು, ಉಪನ್ಯಾಸಕರು, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











