
ವಿರಾಜಪೇಟೆ ಮಾ.7 NEWS DESK : ಕದನೂರು ಗ್ರಾಮದ ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮೋಹೊತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದಲ್ಲಿ ಮುಂಜಾನೆಯಿಂದ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಬಳಿಕ ಪೈಂಗುತ್ತಿ ಕಾರ್ಯಕ್ರಮ ನಡೆಯಿತು. ಸಂಜೆ ಶ್ರೀ ಮುತ್ತಪ್ಪನ್ ವೆಳ್ಳಾಟಂ, ಗುಳಿಗ ವೆಳ್ಳಾಟಂ ತೆರೆಗಳು ನಡೆಯಿತು. ಸಂಜೆ 6.30ಕ್ಕೆ ಆರಂಭವಾದ ತೆರ ಪ್ರದರ್ಶನಗಳು ರಾತ್ರಿ 11 ಗಂಟೆಯ ವೇಳೆಗೆ ಸಮಾಪ್ತಿಯಾಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ವರದಿ : ಕಿಶೋರ್ ಕುಮಾರ್ ಶೆಟ್ಟಿ









