Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಲಭಿಸಿದ ಯೋಜನೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಲಭಿಸಿದ ಯೋಜನೆಗಳು*

ಮಾರ್ಚ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.7 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಕೊಡಗು ಜಿಲ್ಲೆಯ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು. ಕುಶಾಲನಗರ ತಾಲ್ಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ ವಿವಿಧ ಆಸ್ಪತ್ರೆಗಳ ಅಭಿವೃದ್ಧಿಗಾಗಿ ಒಟ್ಟು 650 ಕೋಟಿ ರೂ. ಗಳನ್ನು ಘೋಷಿಸಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಥ್ರ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ. ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು. ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಕಟ್ಟು ಸಮುದಾಯಗಳ 47,859 ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯಡಿ 120 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರ ಕಿಟ್‍ಗಳನ್ನು ನೀಡಲಾಗುತ್ತಿದೆ. ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ರ್ಜೆಗೇರಿಸಲಾಗುವುದು. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಸೋಲಿಗ, ಹಲಸರು, ಜೇನು ಕುರುಬ, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಕೊರಗ, ಬೆಟ್ಟಕುರುಬ, ಯರವ, ಪಣಿಯನ್ ಇತ್ಯಾದಿ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌರ್ಯಗಳನ್ನು ಒದಗಿಸಲು 200 ಕೋಟಿ ರೂ. ಅನುದಾನ ನೀಡಲಾಗುವುದು. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು. ಕೊಡಗು ಜಿಲ್ಲೆಯ ವಿರಾಜಪೇಟೆ-ಪೊನ್ನಂಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಲ್ಲಿ ಭಾರಿ ಮಳೆಯಿಂದಾಗಿ ಹಾನಿ ಒಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ.ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದು. ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಲಾಗುವುದು. ಯಾದಗಿರಿಯ ಶಹಾಪುರದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ಶಾಲೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು. ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು 2015 ರಿಂದ ಇಲ್ಲಿಯವರೆಗೆ 392 ಕಿ.ಮೀ. ರೈಲ್ವೆ ಬ್ಯಾರಿಕೇಡ್‍ಗಳನ್ನು ನಿರ್ಮಿಸಲಾಗಿದೆ. ಇನ್ನೂ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲಿರಿಸಲಾಗಿದೆ. ಕರ್ನಾಟಕದಲ್ಲಿ ಮಾನವ-ಆನೆ ಸಂರ್ಷದ ಸಮಸ್ಯೆಯನ್ನು ಪರಿಹರಿಸಲು ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 20 ಚದರ ಕಿ.ಮೀ ವ್ಯಾಪ್ತಿಯಲ್ಲಿ ಕಾಡಾನೆ Soft Release ಕೇಂದ್ರವನ್ನು ಸ್ಥಾಪಿಸಲು 20 ಕೋಟಿ ರೂ. ನೀಡಲಾಗುವುದು. ರಾಜ್ಯ ವಿಪತ್ತು ಉಪಶಮನ ನಿಧಿ ಹಾಗೂ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅನುದಾನದಡಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಭೂ ಕುಸಿತ ತಡೆಯುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.