
ಮಡಿಕೇರಿ ಮಾ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಮಾ.9 ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯದರ್ಪಣ ಪತ್ರಿಕೆ ಸಂಪಾದಕ ಹಾಗೂ ಸಮಾಜ ಸೇವಕ ಮಂಡಿಬೆಲೆ ರಾಜಣ್ಣ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಪಾಲ್ಗೊಳ್ಳಲಿದ್ದಾರೆ.










