Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭವಾಗಿದೆ : ಎಂ.ಎನ್.ರವೂಫ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭವಾಗಿದೆ : ಎಂ.ಎನ್.ರವೂಫ್*

ಮಾರ್ಚ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.8 NEWS DESK  : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಜನರ ಹಿತ ಕಾಯುವ ದಾಖಲೆಯ ಬಜೆಟ್ ನ್ನು ಮಂಡಿಸಿದ್ದು, ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರೋಧ ಪಕ್ಷಗಳು ಬಜೆಟ್ ನ್ನು ವಿರೋಧಿಸಬೇಕೆಂದೇ ವಿರೋಧಿಸುವುದು ಸರಿಯಲ್ಲ. ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ಹಲವು ಉತ್ತಮ ಕಾರ್ಯಕ್ರಮಗಳನ್ನು ಕೊಡಗು ಜಿಲ್ಲೆಗೆ ನೀಡಲಾಗಿದೆ. ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ, ಕುಶಾಲನಗರ ಆಸ್ಪತ್ರೆಯ ಅಭಿವೃದ್ಧಿ, ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು, ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಮೀಸಲಿಟ್ಟಿರುವುದು, ಮಳೆಹಾನಿಯ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲು ಕ್ರಮ ಕೈಗೊಂಡಿರುವುದು, ಕೂಡಿಗೆ ಕ್ರೀಡಾ ಶಾಲೆಯ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಒದಗಿಸಿರುವುದು, ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲಿರಿಸಿರುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಹಣ ಘೋಷಿಸಿರುವುದರಿಂದ ಕೊಡಗು ಜಿಲ್ಲೆಯ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆತಂತ್ತಾಗಿದೆ.  ಈ ಹಿಂದಿನ ಎಲ್ಲಾ ಬಜೆಟ್ ಗಳಿಗಿಂತ ಪ್ರಸ್ತುತ ವರ್ಷ ಮಂಡಿಸಿರುವ ಬಜೆಟ್ ವಿಭಿನ್ನವಾಗಿದ್ದು, ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಜಿಲ್ಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಲಾಭ ದೊರೆಯಲು ಶಾಸಕದ್ವಯರ ನಿರಂತರ ಪ್ರಯತ್ನದ ಫಲವೇ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

::: ಟೀಕೆ ಸರಿಯಲ್ಲ :::   ಅಲ್ಪಸಂಖ್ಯಾತರು ಶೈಕ್ಷಣಿಕವಾಗಿ ಬೆಳವಣಿಗೆ ಸಾಧಿಸಬೇಕೆಂದು ವಿದ್ಯಾರ್ಥಿಗಳ ವಿದೇಶಿ ವಿದ್ಯಾರ್ಥಿ ವೇತನದ ಮಿತಿಯನ್ನು 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಏರಿಕೆ ಮಾಡಿರುವ ಸರ್ಕಾರ ಪರಿಶಿಷ್ಟ ವಿದ್ಯಾರ್ಥಿಗಳ ಶೈಕ್ಷಣಿಕೆ ಪ್ರಗತಿಗೂ ಸಾಕಷ್ಟು ಅನುದಾನ ಒದಗಿಸಿದೆ. ಉರ್ದು ಶಾಲೆ, ಹಜ್ ಭವನ ಮತ್ತು ವಕ್ಫ್ ಖಬರಸ್ತಾನ್ ಗಳ ಅಭಿವೃದ್ಧಿ ಕುರಿತು ಬಜೆಟ್ ನಲ್ಲಿ ಕಾಳಜಿ ತೋರಿರುವುದು ಸ್ವಾಗತಾರ್ಹ.  ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರಿಗೆ ಮಾತ್ರ ದೊಡ್ಡ ಪ್ರಮಾಣದ ಅನುದಾನ ಮೀಸಲಿಟ್ಟಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುವುದು ಸರಿಯಲ್ಲ. ರಾಜ್ಯದ ಬಜೆಟ್ ಗಾತ್ರ 4ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ದಾಖಲೆಯಾಗಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್ ನಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಎಲ್ಲಾ ಸಮುದಾಯಗಳ ಅಭ್ಯುದಯಕ್ಕಾಗಿ ಮೀಸಲಿಟ್ಟಿರುವ ಹಣ 4ಸಾವಿರ ಕೋಟಿ ರೂ. ಮಾತ್ರ. ಅನುದಾನ ಹಂಚಿಕೆಯಲ್ಲಿ ಸಮಾನತೆ ಎದ್ದು ಕಾಣುತ್ತಿದೆ, ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂದು ಪ್ರಧಾನಮಂತ್ರಿಗಳು ಹೇಳುವ ಮಾತನ್ನು ಒಪ್ಪಿಕೊಳ್ಳುವ ಬಿಜೆಪಿ ಮಂದಿ ಕರ್ನಾಟಕದ ವಿಚಾರದಲ್ಲಿ ಯಾಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಎಂ.ಎನ್.ರವೂಫ್ ಪ್ರಶ್ನಿಸಿದ್ದಾರೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ಪರಿಶಿಷ್ಟರು ಸೇರಿದಂತೆ ಎಲ್ಲಾ ಸಮುದಾಯದ ಜನರ ಹಿತಕಾಯುವ ಬಜೆಟ್ ಇದಾಗಿದ್ದು, ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.