


ಮಡಿಕೇರಿ ಮಾ.10 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ(49) ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಂತಾಪ ಸೂಚಿಸಿದ್ದಾರೆ. ಪಕ್ಷಾತೀತ ನಾಯಕ ಶಿವು ಮಾದಪ್ಪ ಅವರ ಅಗಲಿಕೆ ಅತೀವ ನೋವು ತಂದಿದೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದ ಶಿವು ಮಾದಪ್ಪ ಅವರು ಸ್ನೇಹಜೀವಿಯಾಗಿದ್ದರು. ಸಮಾಜಸೇವೆಯೊಂದಿಗೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ ಎಂದು ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.