


ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಜಿಲ್ಲಾ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಅವರು ಪಕ್ಷಾತೀತ ನಾಯಕ ಶಿವು ಮಾದಪ್ಪ ಅವರ ಅಗಲಿಕೆ ಅತೀವ ನೋವು ತಂದಿದೆ, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದ ಶಿವು ಮಾದಪ್ಪ ಅವರು ಸ್ನೇಹಜೀವಿಯಾಗಿದ್ದರು. ಸಮಾಜಸೇವೆಯೊಂದಿಗೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಕ್ಷದ ಪರವಾಗಿ ಕೋರುವುದಾಗಿ ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ.