ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕುಟ್ಟ ಗ್ರಾಮದ ಶಿವುಮಾದಪ್ಪ ಅವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಾಹಿದ್ ತೆಕ್ಕಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದ ಸಂದರ್ಭ ಹಲವು ಬಾರಿ ಶಿವು ಮಾದಪ್ಪ ಅವರ ಮನೆಗೆ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದೇನೆ. ಅವರ ನಿಧನ ಕೊಡಗು ಜಿಲ್ಲೆಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಶಿವಮಾದಪ್ಪ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸೂಚಕದಲ್ಲಿ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.










