Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.11 ರಂದು ಮಡಿಕೇರಿಯಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.11 ರಂದು ಮಡಿಕೇರಿಯಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ*

ಮಾರ್ಚ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.10 NEWS DESK :  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಾಗೂ ಸುಲೋಚನಾ ಡಾ. ಎಂ.ಜಿ.ನಾಗರಾಜ್ ದಂಪತಿ ದತ್ತಿ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಸಾಹಿತ್ಯ, ಕಲೆ, ಜಾನಪದ, ಪರಿಸರ ಮತ್ತು ಪುರಾತತ್ವ ಕುರಿತ ವಿಚಾರಗೋಷ್ಠಿ, ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.11 ರಂದು  ಮಡಿಕೇರಿಯಲ್ಲಿ ನಡೆಯಲಿದೆ. ಮಡಿಕೇರಿಯ ಎಫ್.ಎಂ.ಸಿ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ವಿಭಾಗದ  ಮಾಜಿ ಮುಖ್ಯಸ್ಥ ಡಾ.ಕೋಡಿರ ಲೋಕೇಶ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಅಧ್ಯಕ್ಷ  ಎಂ.ಪಿ ಕೇಶವ ಕಾಮತ್  ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿರಾಜಪೇಟೆಯ ಸಂತ ಅನಮ್ಮ ಪದವಿ ಕಾಲೇಜಿನ ಉಪನ್ಯಾಸಕರಾದ ಪ್ರತಿಮಾ ರೈ‌ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ, ಖ್ಯಾತ ಸಂಶೋಧಕರು ಹಾಗೂ ದತ್ತಿದಾನಿ ಡಾ. ಎಂ.ಜಿ.ನಾಗರಾಜ್, ಮಡಿಕೇರಿ ಎಫ್.ಎಂ.ಸಿ ಕಾಲೇಜು ಪ್ರಾಂಶುಪಾಲ  ಡಾ.ಮೇಜರ್ ಬಿ.ರಾಘವ,  ಎಫ್.ಎಂ.ಸಿ ಕಾಲೇಜು ಹಿಂದಿ ವಿಭಾಗ ಮುಖ್ಯಸ್ಥ ಡಾ.ಶ್ರೀಧರ್ ಹೆಗಡೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ.  ಮಧ್ಯಾಹ್ನ 12 ಗಂಟೆಗೆ ಕೊಡಗಿನ ಜನಪದ ಕಲೆ ದೇವರ ಕಾಡುಗಳು ಮತ್ತು ಪುರಾತತ್ವ ಸಂಸ್ಕೃತಿ ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗಿದ್ದು, ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕನ್ನಡ ಅದ್ಯಾಪಕರಾದ ಡಾ. ಜ಼ಮೀರ್ ಅಹಮದ್ ವಹಿಸಲಿದ್ದಾರೆ. ಕೊಡಗಿನ ಜಾನಪದ ಕಲೆ ಕುರಿತು ಸಾಹಿತಿ, ಪತ್ರಕರ್ತರು ನಿವೃತ್ತ ಪ್ರಾಂಶುಪಾಲರಾದ ಡಾ. ಜೆ ಸೋಮಣ್ಣ ಮಾತನಾಡಲಿದ್ದಾರೆ. ಕೊಡಗಿನ ದೇವರ ಕಾಡುಗಳ ಕುರಿತು ಅರಣ್ಯ ಕಾಲೇಜಿನ ಮಾಜಿ ಮುಖ್ಯಸ್ಥರಾದ ಡಾಕ್ಟರ್ ಸಿ ಜಿ ಕುಶಾಲಪ್ಪ ಮಾತನಾಡಲಿದ್ದಾರೆ. ಕೊಡಗಿನ ಪುರಾತತ್ವ ಸಂಸ್ಕೃತಿ ಕುರಿತು ಪುರಾತತ್ವ ಇಲಾಖೆಯ ಸಹ ನಿರ್ದೇಶಕರಾದ ಶ್ರೀಮತಿ ರೇಖಾ ರವರು ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಆಯ್ದ ಕವಿಗಳ ಕವಿಗೋಷ್ಠಿ ಯನ್ನು ಏರ್ಪಡಿಸಲಾಗಿದ್ದು, ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀ ಬಿ.ಎ.ಶಂಷೂದ್ದೀನ್ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ನೆರವೇರಿಸಲಿದ್ದಾರೆ. ಗೋಷ್ಠಿಯ ಆಶಯ ನುಡಿಯನ್ನು ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಯನಾ ಕಷ್ಯಪ್ ನಡೆಸಿಕೊಂಡಲಿದ್ದಾರೆ. ಕವಿಗೋಷ್ಠಿಯಲ್ಲಿ ಲೀಲಾವತಿ ತೋಡಿಕಾನ, ಶ್ವೇತಾ ರವೀಂದ್ರ, ಡಾ. ಕಾವೇರಿ ಪ್ರಕಾಶ್, ಪುಷ್ಪಲತಾ ಶಿವಪ್ಪ,, ವಿಮಲಾ ದಶರಥ್,  ರೇವತಿ ರಮೇಶ್, ಕೆ.ಜಿ.ಅರ್ಪಿತಾ, ಗಿರೀಶ್ ಕಿಗ್ಗಾಲು, ಟಾಮಿ ಥೋಮಸ್ ನಾ ಕನ್ನಡಿಗ, ವಿ.ಎಸ್ ವೈಲೇಶ್, ರಂಜಿತ್ ಕವಲಪಾರ ಹಾಗೂ ಜಗದೀಶ್ ಜೋಡಬೀಟಿ ಭಾಗವಹಿಸಲಿದ್ದಾರೆ.  ಅಪರಾಹ್ನ 3 ಗಂಟೆಗೆ ಸಮರೊಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತ ಶಯನ ವಹಿಸಲಿದ್ದಾರೆ. ಸಮಾರೋಪ ಭಾಷಣವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ನೆರವೇರಿಸಲಿದ್ದಾರೆ. ಮಡಿಕೇರಿಯ ಪೊಲೀಸ್ ವೃತ್ತ ನಿರೀಕ್ಷಕರಾದ ಪಿ.ಕೆ.ರಾಜು  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರಶಂಸನಾ ಪತ್ರ ವಿತರಣೆ ಮಾಡಲಿದ್ದಾರೆ. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.