
ಮಡಿಕೇರಿ ಮಾ.11 NEWS DESK : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸಲು ಸಭೆಯು ಮಾ.13 ರಂದು ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆಯವರೆಗೆ ಮಡಿಕೇರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಚಾ.ವಿ.ಸ.ನಿ.ನಿ., ಮಡಿಕೇರಿರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.








