


ವಿರಾಜಪೇಟೆ ಮಾ.12 NEWS DESK : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೊಡವ ಕೂಟಾಳಿಯಡ ಕೂಟದ ವತಿಯಿಂದ ಹಿರಿಯ ಜಾನಪದ ಕಲಾವಿದೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಅವರನ್ನು ಸನ್ಮಾನಿಸಲಾಯಿತು. ಜೂನಿಯರ್ ಕಾಲೇಜಿನ ನಿವೃತ್ತ ಉಪನ್ಯಾಸಕಿಯಾಗಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಬಾಲ್ಯದಿಂದಲೂ ಉಮ್ಮತ್ತಾಟ್, ಕತ್ತಿಯಾಟ್, ಬೊಳಕಾಟ್, ಕೊಡವ ಹಾಡುಗಳನ್ನು ಕಲಿತು, ಇತರರಿಗೆ ಕಲಿಸುತ್ತಾ ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರದರ್ಶನ ನೀಡಿಸುತ್ತಾ ಬಂದಿರುವುದರ ಜೊತೆಗೆ ಕೊಡವ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇವರ ಈ ಸಾಧನೆಯನ್ನು ಗುರುತಿಸಿ ಕೊಡವ ಕೂಟಾಳಿಯಡ ಕೂಟ ಸಂಘಟನೆ ಅವರ ಮನೆ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿತು. ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸಂಸ್ಥಾಪಕಿ ಚಿಮ್ಮಚ್ಚಿರ ಪವಿತ ರಜನ್, ಖಜಾಂಚಿ ಬೊಜ್ಜಂಗಡ ಭವ್ಯ ದೇವಯ್ಯ ಮತ್ತು ಸದಸ್ಯೆ ಇಟ್ಟಿರ ಭವ್ಯ ಈಶ್ವರ್ ಪಾಲ್ಗೊಂಡಿದ್ದರು.