


ಸುಂಟಿಕೊಪ್ಪ NEWS DESK ಮಾ.12 : ಕಾರೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ವ್ಯಕ್ತಿಗಳು ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ನಿಜಾಮುದ್ದೀನ್ ಹಾಗೂ ಹರ್ಬಜ್ ಅವರಿಗೆ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ನಿಜಾಮುದ್ದೀನ್ ಅವರ ಕಾಲು ಮುರಿತಗೊಂಡಿದ್ದು, ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.