


ಮಡಿಕೇರಿ ಮಾ.13 NEWS DESK : ಕಳೆದ 9 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಿದ್ದಾಪುರ ಗ್ರಾಮ ಪಂಚಾಯ್ತಿಯ ಮೈಸೂರು ರಸ್ತೆ ಹಾಗೂ ಕಾಲೋನಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅನುದಾನ ಸುಮಾರು 5 ಲಕ್ಷ ದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ಕೈಗೊಂಡಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಅನುದಾನ ಒದಗಿಸಿದ ಶಾಸಕರು ಹಾಗೂ ಸಹಕರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಜಿಲ್ಲಾ ಅಲ್ಪ ಸಂಖ್ಯಾತ ಅಧ್ಯಕ್ಷ ಹನೀಫ್, ಬ್ಲಾಕ್ ಅಲ್ಪಸಂಖ್ಯಾತ ಅಧ್ಯಕ್ಷ ಕೋಲುಮಂಡ ರಫೀಕ್ ಅವರಿಗೆ ಗ್ರಾಮಸ್ಥರು ಧನ್ಯವಾದ ಸಲ್ಲಿಸಿದ್ದಾರೆ.