


ನಾಪೋಕ್ಲು ಮಾ.13 NEWS DESK : ಕೊಡಗು ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಹಾಗೂ ಪಶು ಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾ.14 ರಂದು ಬೇತು ಗ್ರಾಮದಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ನಡೆಯಲಿದೆ. ಬೆಳಿಗ್ಗೆ 9.30 ರಿಂದ 11.30 ಗಂಟೆವರೆಗೆ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕಲಾಗುವುದು. ಕಾರ್ಯಕ್ರಮದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವೆಯ ಉಪ ನಿರ್ದೇಶಕರಾದ ಲಿಂಗರಾಜ್ ದೊಡ್ಡಮನಿ, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಕೆ.ಪ್ರಸನ್ನ ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ : ದುಗ್ಗಳ ಸದಾನಂದ.