


ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕಾಂಗ್ರೆಸ್ ಭವನ ( ಕಾಂಗ್ರೆಸ್ ಪಕ್ಷದ ಸುಸಜ್ಜಿತವಾದ ನೂತನ ಕಚೇರಿ) ನಿರ್ಮಿಸುವ ನಿಟ್ಟಿನಲ್ಲಿ ಕೊಡಗು ಕಾಂಗ್ರೆಸ್ ನಿಯೋಗವು ಬೆಂಗಳೂರಿನಲ್ಲಿ ಸಭೆ ನಡೆಸಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಸ್.ಚಂದ್ರಮೌಳಿ, ಕುಡ ಸಮಿತಿ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಹಾಗೂ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.