


ಮಡಿಕೇರಿ ಮಾ.13 NEWS DESK : ಮಾಯಮುಡಿ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಗ್ರಾಮ ಸಭೆಯು ಮಾ.17 ರಂದು ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮಾಯಮುಡಿ ಕಂಗಳತ್ತು ನಾಡು ಮಹಿಳಾ ಸಮಾಜದ ಸಭಾಂಗಣದಲ್ಲಿ ನೋಡಲ್ ಅಧಿಕಾರಿ, ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರೀತಿ ಚಿಕ್ಕಮಾದಯ್ಯ ಅವರ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂದು ಕೊರತೆಗಳ ಕುರಿತು ಚರ್ಚಿಸಿ ಪಂಚಾಯಿತಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ ಮನವಿ ಮಾಡಿದ್ದಾರೆ.