


ವಿರಾಜಪೇಟೆ NEWS DESK ಮಾ.14 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಲ್ಲಿಸಿದ 10 ಕೋಟಿ ರೂಗಳ ವಿಶೇಷ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಸರ್ಕಾರದಿಂದ ಅನುಮೋದನೆ ದೊರಕಿದೆ. 2024-25 ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದ ಲೆಕ್ಕ ಶೀರ್ಷಿಕೆ 5054 ರಡಿ ಎ.ಎಸ್.ಪೊನ್ನಣ್ಣ ಅವರು ಸಲ್ಲಿಸಿದ ಪ್ರಸ್ತಾನನೆಯ ಆಧಾರದಲ್ಲಿ ಕಾಮಗಾರಿಗೆ ಅನುಮೋದನೆ ದೊರಕಿದ್ದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 34 ಆಯ್ದ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಒಟ್ಟು 12 ಪ್ಯಾಕೆಜ್ ಗಳಲ್ಲಿ 10 ಕೋಟಿ ಮೊತ್ತದಲ್ಲಿ ಕಾಮಗಾರಿ ನಡೆಸುವಂತೆ ಸರ್ಕಾರದ ಆದೇಶ ಸಂಖ್ಯೆ: ಗ್ರಾಅಪ:634-1:ಆರ್.ಆರ್.ಸಿ:2024(