


ಕುಶಾಲನಗರ ಮಾ.14 NEWS DESK : ಕುಶಾಲನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ವಿಭಾಗದ ಆಶ್ರಯದಲ್ಲಿ ಆಯೋಜಿಸಿಲಾದ ಮೂರು ದಿನಗಳ ಜನಪದ ಉತ್ಸವಕ್ಕೆ ತೆರೆ ಬಿದ್ದಿತು. ಜನಪದ ಕಲಾತಂಡಗಳ ಮೆರವಣಿಗೆಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಚಾಲನೆ ನೀಡಿದರು. ಜನಪದ ಕಾರ್ಯಾಗಾರವನ್ನು ಮೈಸೂರಿನ ಉಮೇಶ್ ಉದ್ಘಾಟಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಸಿದ್ಧಪಡಿಸಿದ ದೇಶಿ ಆಹಾರ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು, ಕಾಲೇಜಿನ ಅಭಿವೃದ್ಧಿ ಸಮಿತಿಯ ಪ್ರಮುಖರು ಚಾಲನೆ ನೀಡಿದ್ದು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿದವು. ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನವನೀತ್ ಪೊನ್ನೆಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪನ್ಯಾಸಕರು ಇದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಹಾಡುಗಳು ನೃತ್ಯ ಪ್ರದರ್ಶನ ಕಾರ್ಯಕ್ರಮ ಜರುಗಿತು. ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಜನಪದ ಕಲಾ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. ಕಾಲೇಜು ಪ್ರಾಂಶುಪಾಲರಾದ ಪ್ರೊ. ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕರಾದ ಡಾ ಪುಟ್ಟರಾಜು, ಟಿ ಎಂ ಸುಧಾಕರ್ ,ಡಾ.ಪಿ.ಪಿ.ವಂದನ, ಮಧುಶ್ರೀ, ಡಾ.ಬಿ.ಕೆ.ಕುಮಾರ್ ಡಾ.ಎಂ.ರಶ್ಮಿ ಮತ್ತಿತರರು ಇದ್ದರು.