


ನಾಪೋಕ್ಲು ಮಾ.14 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುದೀರ್ಘ 35 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಎನ್.ಜಾನಕಿಗೆ ಸಂಸ್ಥೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಎಸ್.ಎನ್.ಜಾನಕಿಯ ಮತ್ತು ಅವರ ಪತಿ ಯಪಾರೆ ಲಿಂಗಪ್ಪ ಅವರಿಗೆ ಸಂಘದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪೆರುಮುಂಡ, ಗ್ರಾ.ಪಂ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ವಿನೀತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತ್ ಸದಸ್ಯರುಗಳು, ಹಿರಿಯ ಸಹಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಗಳಾದ ಎಂ.ಆರ್.ಗೋಪಾಲಕೃಷ್ಣ ಸ್ವಾಗತಿಸಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.