Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಅರಣ್ಯ ಸಚಿವರಿಂದ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಅರಣ್ಯ ಸಚಿವರಿಂದ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.15 NEWS DESK : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು, ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ:: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು. ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ. ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ. ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ RRT, ADC, ಮತ್ತು ಇಟಿಎಫ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ತಂಡಗಳನ್ನು ಒಟ್ಟುಗೂಡಿಸಿ ಮಾನವ ವನ್ಯಜೀವಿ ಸಂಘರ್ಷ ಉಪ ತಂಡಗಳಾಗಿ ರಚಿಸಿ ಆಯ್ತ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಶಾಸಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.