


ಮಡಿಕೇರಿ ಮಾ.15 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ (2024-25)ವು ಮಾ.18 ರಂದು ಬೆಳಗ್ಗೆ 10 ಗಂಟೆಗೆ ಕೂಡಿಗೆ ಡಯಟ್ ಸಭಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷರಾದ ಡಿ.ಭಾಸ್ಕರ್ ನಾಯಕ್, ಕೂಡಿಗೆ ಗ್ರಾ.ಪಂ. ಅಧ್ಯಕ್ಷರಾದ ಕೆ.ಟಿ.ಗಿರೀಶ್, ಕೊಡಗು ಜಿ.ಪಂ. ಆಡಳಿತಾಧಿಕಾರಿಗಳು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೂಡಿಗೆ ಡಯಟ್ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರಾದ(ಅಭಿವೃದ್ಧಿ) ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್.ಗಾಯತ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಇತರರು ಪಾಲ್ಗೊಳ್ಳಲಿದ್ದಾರೆ.