


ಮಡಿಕೇರಿ NEWS DESK ಮಾ.16 : ಕೊಡಗು ಪತ್ರಕರ್ತರ ಸಂಘ(ರಿ)ದ ಕ್ಷೇಮಾಭಿವೃದ್ಧಿ ಸಮಿತಿಯ 2025-27ರ ಸಾಲಿನ ಅಧ್ಯಕ್ಷರಾಗಿ ಜಿ.ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎ. ಮುರಳೀಧರ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಪ್ರಸಾದ್ ಸಂಪಿಗೆ ಕಟ್ಟೆ ಹಾಗೂ ಟಿ .ಜೆ. ಪ್ರವೀಣ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಹೆಚ್.ಆರ್. ಹರೀಶ್ ಕುಮಾರ್, ವೀರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯ, ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ವಿಘ್ನೇಶ್ ಭೂತನಕಾಡು, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷರಾದ ಕಿರಿಯಮಾಡ ರಾಜ್ ಕುಶಾಲಪ್ಪ, ಸಂಘದ ಸಲಹೆಗಾರರಾದ ಟಿ.ಪಿ. ರಮೇಶ್. ಬಿ.ಜಿ.ಅನಂತಶಯನ ಆಯ್ಕೆಯಾಗಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.