


ಮಡಿಕೇರಿ NEWS DESK ಮಾ.16 : ತೋಟದ ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಗೋಣಿಕೊಪ್ಪದ ಅತ್ತೂರು ಗ್ರಾ.ಪಂ ವ್ಯಾಪ್ತಿಯ ಚನ್ನಂಗೊಲ್ಲಿ ಗ್ರಾಮದಲ್ಲಿ ನಡೆದಿದೆ. ತೋಟದ ಕಾರ್ಮಿಕ ಮಹಿಳೆ ಭವಾನಿ ಎಂಬುವವರ ಪುತ್ರಿ ಚನ್ನಂಗೊಲ್ಲಿ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ(10) ಲಾವಣ್ಯ ಎಂಬಾಕೆಯೇ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೆರೆಯ ಕೆಸರಿನಲ್ಲಿ ಸಿಲುಕಿದ ಲಾವಣ್ಯ ಮೃತಪಟ್ಟಳು ಎಂದು ತಿಳಿದು ಬಂದಿದೆ. ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.