


ಮಡಿಕೇರಿ ಮಾ.17 NEWS DESK : ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ಇನ್ ಯೋಗ ಥೆರಪಿ (PGDYT)ನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಸಿ.ಶಿವರಾಜ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಈ ಹಿಂದೆ ಇವರು 2022-23ನೇ ಸಾಲಿನಲ್ಲಿ ಪೋಸ್ಟ್ ಗ್ರಾಜುಯೇಷನ್ ಡಿಪ್ಲೋಮಾ ಇನ್ ಯೋಗ ಎಜುಕೇಶನ್ (PGDYEd) ನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದಿದ್ದು, ಇದೀಗ ಯೋಗ ಥೆರಪಿನಲ್ಲಿ ಡಿಸ್ಟಿಂಕ್ಷನ್ ವಿತ್ ಪ್ರಾಕ್ಟಿಕಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆಯುವುದರ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.